ಲೋಕಾಯುಕ್ತ ವಿಶ್ವನಾಥಶೆಟ್ಟಿ ಯವರ ಆರೋಗ್ಯ ವಿಚಾರಿಸಿದ ದೇವೇಗೌಡರು



ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥಶೆಟ್ಟಿ ಅವರ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರು ಸ್ವತಂತ್ರವಾಗಿ ಕೆಲಸ ಮಾಡಲು ಬಿಡದೆ ಹಸ್ತಕ್ಷೇಪ ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ವಾಗ್ದಾಳಿ ನಡೆಸಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿಗಳ ಮೇಲೆ ಹಲ್ಲೆಯಂತಹ ಘಟನೆ ದೇಶದಲ್ಲೇ ಮೊದಲನೆಯದಾಗಿದೆ. ಇಂತಹ ಘಟನೆ ಆಗಬಾರದಿತ್ತು ಎಂದು ವಿಷಾದಿಸಿದರು.
ವಿಶ್ವನಾಥಶೆಟ್ಟಿ ಅವರ ಮೇಲೆ ಹಲ್ಲೆ ನಡೆದ 10 ನಿಮಿಷದಲ್ಲಿ ಆಸ್ಪತ್ರೆಗೆ ಸೇರಿಸಿದ್ದರಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಇದೇ ವೇಳೆ ಮಾತನಾಡಿದ ವಿಶ್ವನಾಥಶೆಟ್ಟಿ ಅವರ ವೈದ್ಯ ದಿವಾಕರ್, ನ್ಯಾಯಮೂರ್ತಿ ವಿಶ್ವನಾಥಶೆಟ್ಟಿ ಅವರು ಗುಣಮುಖರಾಗುತ್ತಿದ್ದಾರೆ. ನಾಳೆ ಡಿಸ್ಚಾರ್ಜ್ ಆಗುತ್ತಿದ್ದಾರೆ. ಆದರೆ, ಅವರು ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯುವ ಅಗತ್ಯವಿದೆ ಎಂದರು.
Comments