ನಲಪಾಡ್ ಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಣೆ

ಉದ್ಯಮಿ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೊಹಮದ್ ನಲಪಾಡ್ ಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಗೆ ಮತ್ತೆ ಜೈಲೇ ಗತಿಯಾಗಿದೆ. ಮುಹಮ್ಮದ್ ನಲಪಾಡ್ ಹ್ಯಾರಿಸ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ ಏಕ ಸದಸ್ಯ ಪೀಠ ತಿರಸ್ಕರಿಸಿದೆ.
ಸೋಮವಾರ ನಡೆದ ವಿಚಾರಣೆ ವೇಳೆ ನ್ಯಾಯಾಲಯವು ಜಾಮೀನು ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ವಿದ್ವತ್ ಮೇಲೆ ದಾಳಿ ನಡೆಸಿರುವುದು ವೀಡಿಯೋ ದೃಶ್ಯಗಳಿಂದ ಸಾಬೀತಾಗಿದೆ. ನಲಪಾಡ್ ಪ್ರಭಾವಿ ವ್ಯಕ್ತಿಯ ಮಗ. ಹೀಗಾಗಿ ಪ್ರಕರಣದ ತನಿಖೆ ಪೂರ್ಣವಾಗುವವರೆಗೆ ಜಾಮೀನು ನೀಡುವುದಕ್ಕೆ ಆಗದು ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ ಎನ್ನಲಾಗಿದೆ.
Comments