ಉದ್ಯೋಗಿಗಳಿಗೆ ಇಲ್ಲಿದೆ ಸಿಹಿ ಸುದ್ದಿ..!!

7 ನೇ ವೇತನ ಆಯೋಗ ಜಾರಿಯಾದ ನಂತರದಲ್ಲಿ ಕೇಂದ್ರ ಸರ್ಕಾರಿ ನೌಕರರ ಗ್ರಾಚ್ಯುಟಿ ಮಿತಿ 10 ಲಕ್ಷ ರೂ.ನಿಂದ 20 ಲಕ್ಷ ರೂ.ಗೆ ಏರಿಕೆಯಾಗಿದೆ.ಈ ಬದಲಾವಣೆ ಕಾಯ್ದೆ ರೂಪದಲ್ಲಿರಬೇಕೆಂದು ಕಾರ್ಮಿಕ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಹಿನ್ನಲೆಯಲ್ಲಿ ತೆರಿಗೆ ಮುಕ್ತ ಗ್ರಾಚ್ಯುಟಿ ಮಿತಿ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ.
ಲೋಕಸಭೆಯಲ್ಲಿ ಗ್ರಾಚ್ಯುಟಿ ಪಾವತಿ ತಿದ್ದುಪಡಿ ಮಸೂದೆ ಅಂಗೀಕಾರವಾಗಿದ್ದು, ತೆರಿಗೆ ಮುಕ್ತ ಗ್ರಾಚ್ಯುಟಿ ಮೊತ್ತವನ್ನು ನಿರ್ಧರಿಸುವ ಅಧಿಕಾರವನ್ನು ಸರ್ಕಾರಕ್ಕೆ ನೀಡುವ ಪ್ರಸ್ತಾವನೆಯನ್ನು ಮಸೂದೆ ಒಳಗೊಂಡಿದೆ. ಕಳೆದ ಲೋಕಸಭೆ ಅಧಿವೇಶನದಲ್ಲಿಯೇ ಕೇಂದ್ರ ಕಾರ್ಮಿಕ ಖಾತೆ ಸಹಾಯಕ ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ವಿಧೇಯಕ ಮಂಡಿಸಿದ್ದರು. ಕೇಂದ್ರ ಸರ್ಕಾರಿ ನೌಕರರಿಗೆ ಮೊದಲು 10 ಲಕ್ಷ ರೂ. ಇದ್ದ ತೆರಿಗೆ ಮುಕ್ತ ಗ್ರಾಚ್ಯುಟಿ ಸೌಲಭ್ಯವನ್ನು 20 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಅದನ್ನು ಖಾಸಗಿ ವಲಯಕ್ಕೂ ವಿಸ್ತರಿಸಲಾಗ್ತಿದೆ. ವಿಧೇಯಕಕ್ಕೆ ಲೋಕಸಭೆ ಒಪ್ಪಿಗೆ ನೀಡಿದ್ದು, ರಾಜ್ಯಸಭೆಯಲ್ಲಿ ಅನುಮೋದನೆ ಸಿಗಬೇಕಿದೆ.
Comments