ವರುಣನ ಆರ್ಭಟ ಇನ್ನೂಎರಡು ದಿನಗಾಲ ಕಾಲ ಮುಂದುವರೆಯಲಿದೆ

ಬಂಗಳಕೊಲ್ಲಿಯ ನೈಋುತ್ಯ ದಿಕ್ಕಿನಿಂದ ತಮಿಳುನಾಡು ಮತ್ತು ಶ್ರೀಲಂಕಾ ನಡುವಿನ ಕೊಮರಿನೇರಿಯಾವರೆಗೆ ಉಂಟಾಗಿದ್ದ ವಾಯುಭಾರ ಕುಸಿತ ಬಲಗೊಂಡು ಅರಬ್ಬೀಸಮುದ್ರದ ಆಗ್ನೇಯ ದಿಕ್ಕಿನವರೆಗೆ ವ್ಯಾಪಿಸಿರುವುದರಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ.
ಗುರುವಾರ ಹಾಸನ, ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಯ ವಿವಿಧೆಡೆ 75ರಿಂದ 80 ಮಿ.ಮೀ., ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಶಿವಮೊಗ್ಗ, ಬಳ್ಳಾರಿ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ 30 ಮಿ.ಮೀ.ನಿಂದ 56 ಮಿ.ಮೀ. ವರೆಗೆ ಮಳೆಯಾಗಿದೆ. ಶುಕ್ರವಾರ ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ತಿಳಿಸಿದ್ದಾರೆ.
Comments