ರಾಜ್ಯದ ಹಲವಡೆ ಎಸಿಬಿ ದಾಳಿಗೆ ನಡುಗಿದ ಅಧಿಕಾರಿಗಳು

ರಾಜ್ಯದ ಹಲವೆಡೆ ಇಂದು ಬೆಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸುವ ಮೂಲಕ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೆಳಗಾವಿ, ಧಾರವಾಡ, ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆಯಲ್ಲಿ ಎಸಿಬಿ ದಾಳಿ ನಡೆದಿದೆ. ಬೆಳಗಾವಿಯ ಎಇಇ ಕಿರಣ್ ಸುಬ್ಬರಾವ್ ಮನೆ, ಕಚೇರಿ ಸೇರಿ 6 ಕಡೆ ದಾಳಿ ನಡೆದಿದೆ. ಬೆಳಗಾವಿ, ಕಲಬುರಗಿ, ಶಿವಮೊಗ್ಗ, ಚಿತ್ರದುರ್ಗ ಸೇರಿದಂತೆ ವಿವಧ ಜಿಲ್ಲೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ಮಹಾನಗರ ಪಾಲಿಕೆ ಎಇಇ ಕಿರಣ್ ಸುಬ್ಬುರಾವ್ ಭಟ್ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ. ಎಸಿಬಿ ಎಸ್ ಅಮರನಾಥ್ ರೆಡ್ಡಿ ನೇತೃತ್ವದಲ್ಲಿ ಬೆಳಗಾವಿಯಲ್ಲಿರುವ ಮೂರು ಮನೆಗಳ ಮೇಲೆ ದಾಳಿ ಮಾಡಲಾಗಿದೆ.ಅಕ್ರಮ ಆಸ್ತಿ ಗಳಿಕೆ ಅರೋಪ ಹಿನ್ನೆಲೆಯಲ್ಲಿ ಟಿಳಕವಾಡಿ, ರಾಣಿ ಚೆನ್ನಮ್ಮ ನಗರ, ಹಿಂದವಾಡಿಯಲ್ಲಿರುವ ಕಿರಣ್ ಸುಬ್ಬರಾವ್ ಭಟ್ ಮನೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
Comments