ಜಿ.ಎಸ್.ಟಿ. ರಿಟರ್ನ್ಸ್ ನಿಂದ ನಿಮಗೆ ಸಿಹಿ ಸುದ್ದಿ..!!
ಪ್ರತಿ ತಿಂಗಳು ಜಿ.ಎಸ್.ಟಿ. ರಿಟರ್ನ್ಸ್ ಸಲ್ಲಿಕೆಯಿಂದ ವಿನಾಯಿತಿ ನೀಡುವುದು ಸೇರಿದಂತೆ, ಹಲವು ವಿಚಾರಗಳ ಕುರಿತು ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.) ಮಂಡಳಿ ಮುಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಉದ್ಯಮ ಸಂಸ್ಥೆಯೊಂದು ಸತತ 6 ತಿಂಗಳವರೆಗೆ ಜಿ.ಎಸ್.ಟಿ. ರಿಟರ್ನ್ಸ್ ಸಲ್ಲಿಕೆ ಮಾಡದಿದ್ದರೆ, ವರ್ಷಕ್ಕೆ 2 ಸಲ ರಿಟರ್ನ್ಸ್ ಸಲ್ಲಿಕೆ ಮಾಡಬಹುದಾಗಿದೆ. ಜಿ.ಎಸ್.ಟಿ. ನಿಯಮಗಳನ್ನು ಸರಳೀಕೃತಗೊಳಿಸಲಾಗುತ್ತಿದೆ. ಉದ್ದಿಮೆ ಸಂಸ್ಥೆಗಳು 6 ತಿಂಗಳು ಯಾವುದೇ ತೆರಿಗೆ ಪಾವತಿಸದಿದ್ದರೆ, ಪ್ರತಿ ತಿಂಗಳು ರಿಟರ್ನ್ಸ್ ಸಲ್ಲಿಕೆಯಿಂದ ವಿನಾಯಿತಿ ಪಡೆಯಲಿದ್ದು, 6 ತಿಂಗಳಿಗೊಮ್ಮೆ ರಿಟರ್ನ್ಸ್ ಸಲ್ಲಿಕೆ ಮಾಡಬಹುದು. ಈ ನಿಟ್ಟಿನಲ್ಲಿ ಜಿ.ಎಸ್.ಟಿ. ಮಂಡಳಿ ಕಾರ್ಯಪ್ರವೃತ್ತವಾಗಿದ್ದು, ಮಂಡಳಿಯ ಮುಂದಿನ ಸಭೆಯಲ್ಲಿ ಜಿ.ಎಸ್.ಟಿ. ರಿಟರ್ನ್ಸ್ ಸಲ್ಲಿಕೆ ನಿಯಮ ಸಡಿಲಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ. ಜಿ.ಎಸ್.ಟಿ. ರಿಟರ್ನ್ಸ್ ಸಲ್ಲಿಕೆ ಕುರಿತಾಗಿ ವ್ಯಾಪಕವಾದ ದೂರು ಕೇಳಿ ಬಂದಿರುವ ಹಿನ್ನಲೆಯಲ್ಲಿ ಕ್ರಮ ಕೈಗೊಳ್ಳಲಾಗಿದ್ದು, ವಹಿವಾಟು ಆಧರಿಸಿ ರಿಟರ್ನ್ಸ್ ಸಲ್ಲಿಕೆ ಮಾಡುವ ಬಗ್ಗೆ ನಿಯಮ ಸರಳಿಕೃತಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
Comments