ಮಹಿಳೆಯರ ಉತ್ತೇಜನಕ್ಕೆ ಮುಂದಾದ ಕೇಂದ್ರ ಸರ್ಕಾರ

ಮಹಿಳಾ ಸಬಲೀಕರಣಕ್ಕೆ 'ಉದ್ಯೋಗಿನಿ' ಯೋಜನೆಯಲ್ಲಿ ಮಹತ್ತರ ಬದಲಾವಣೆ ತಂದಿರುವ ರಾಜ್ಯ ಸರ್ಕಾರ 3 ಲಕ್ಷ ರೂ. ಸಾಲ ಸೌಲಭ್ಯ ಒದಗಿಸಲಿದೆ. ಇದರಲ್ಲಿ 90,000 ರೂ. ಸಬ್ಸಿಡಿ ನೀಡಲಾಗುವುದು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಉದ್ಯೋಗಿನಿ ಯೋಜನೆಯಡಿ ಮಹಿಳೆಯರನ್ನು ಉದ್ಯಮಶೀಲರನ್ನಾಗಿ ರೂಪಿಸಲಾಗುತ್ತಿದೆ. ಯೋಜನೆಯಲ್ಲಿ ಬದಲಾವಣೆ ಮಾಡಲಾಗಿದ್ದು, ವಾರ್ಷಿಕವಾಗಿ 1.5 ಲಕ್ಷ ರೂ. ಆದಾಯ ಹೊಂದಿರುವ 55 ವರ್ಷದೊಳಗಿನ ಎಲ್ಲಾ ಮಹಿಳೆಯರಿಗೆ ಸಾಲ ನೀಡಲಾಗುತ್ತದೆ.
ಮೀನು ಮಾರಾಟ, ಬೇಕರಿ, ದಿನಸಿ ಅಂಗಡಿ, ಉಪ್ಪಿನಕಾಯಿ, ಅಗರಬತ್ತಿ, ಕಾಫಿ -ಟೀ ಮಾರಾಟ, ಸೇರಿದಂತೆ ಸುಮಾರು 88 ಸಣ್ಣ ಪ್ರಮಾಣದ ಉದ್ಯಮ ಆರಂಭಿಸಲು ಮಹಿಳೆಯರಿಗೆ 3 ಲಕ್ಷ ರೂ. ವರೆಗೆ ಸಾಲ ನೀಡಲಾಗುವುದು. ಇದರಲ್ಲಿ 90,000 ರೂ. ಗಳನ್ನು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಭರಿಸಲಿದೆ.
Comments