ಸ್ಯಾಂಡಲ್ ವುಡ್ ಹಿರಿಯ ನಟಿ ಜಯಂತಿ ಆರೋಗ್ಯದಲ್ಲಿ ಚೇತರಿಕೆ

ಎರಡು ದಿನಗಳಿಂದ ವಿಕ್ರಂ ಆಸ್ಪತ್ರೆಯ ಹಿರಿಯ ಶ್ವಾಸಕೋಶ ತಜ್ಞ ಡಾ ಸತೀಶ್ ಚಿಕಿತ್ಸೆ ನೀಡುತ್ತಿದ್ದು ತೀವ್ರ ನಿಗಾಘಟಕದಲ್ಲಿರುವ ಜಯಂತಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು, ಜಯಂತಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದ ತಕ್ಷಣ ಚಿತ್ರರಂಗದ ಅನೇಕ ಗಣ್ಯರು ಮತ್ತು ಕಲಾವಿದರು ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಇತ್ತ ಜಯಂತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿತ್ತಿದ್ದರೆ ಹೊರಗಡೆ ಜಯಂತಿ ನಿಧನ ಹೊಂದಿದ್ದಾರೆ ಎನ್ನುವ ಸುದ್ದಿಗಳು ಹರಡುವುದಕ್ಕೆ ಶುರುವಾಗಿದೆ. ಕೇವಲ ಸಾಮಾನ್ಯ ಜನರು ಮಾತ್ರವಲ್ಲದೆ ಅದೆಷ್ಟೋ ಸಿನಿಮಾ ಸ್ಟಾರ್ ಗಳು ಕೂಡ ಜಯಂತಿ ನಿಧನರಾಗಿದ್ದಾರೆ ಎಂದುಕೊಂಡಿದ್ದಾರೆ. ಆದರೆ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ನಟಿ ಜಯಂತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡು ದಿನಗಳ ಚಿಕಿತ್ಸೆ ನಂತರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವಿಕ್ರಂ ಆಸ್ಪತ್ರೆಯ ಮೂಲಗಳು ತಿಳಿಸಿವೆ.
Comments