ಭಟ್ರ ಚುನಾವಣಾ ಥೀಮ್ ಸಾಂಗ್ ನಲ್ಲಿ ರಾಹುಲ್ ದ್ರಾವಿಡ್ ರಾಯಭಾರಿ

ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಅವರು ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಭಿತ್ತಿಪತ್ರಗಳು ಸೇರಿದಂತೆ ಮತದಾನ ಜಾಗೃತಿಗಾಗಿ ಸಿದ್ದಪಡಿಸಲಾದ ಪ್ರಚಾರ ಸಾಮಗ್ರಿ ಬಿಡುಗಡೆ ಮಾಡಿ ದರು.
ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರು ಮತದಾನದ ಕುರಿತು ಜಾಗೃತಿ ರಾಯಭಾರಿಯಾಗಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು. ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಸಂಯೋಜನೆಯಲ್ಲಿ ಥೀಮ್ ಸಾಂಗ್ ಸಿದ್ದಪಡಿಸಲಾಗಿದ್ದು ,ಈ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಮೇ 12 ರಂದು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು ಮೇ 15 ರಂದು ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಎಪ್ರಿಲ್ 24 ಕೊನೆಯ ದಿನವಾಗಿದೆ.
Comments