ನಡೆದಾಡುವ ದೇವರ 111 ನೇ ಜನ್ಮದಿನಕ್ಕೆ ಸಕಲ ಸಿದ್ಧತೆ ...!!
ಸಿದ್ಧಗಂಗಾ ಮಠದ ಆವರಣದಲ್ಲಿ ಶಿವಕುಮಾರ ಸ್ವಾಮೀಜಿಗಳ ಗುರುವಂದನಾ ಮಹೋತ್ಸವ ಮತ್ತು 111 ನೇ ಜನ್ಮ ದಿನೋತ್ಸವ ಆಚರಣೆಗೆ ಸಿದ್ಧತೆಗಳು ಪೂರ್ಣಗೊಂಡಿವೆ. ಜನ್ಮದಿನೋತ್ಸವದಲ್ಲಿ ಸುಮಾರು 2 ಲಕ್ಷ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ.
ಸಾಮೂಹಿಕ ಪಾದಪೂಜೆಗೆ ವ್ಯವಸ್ಥೆ ಮಾಡಲಾಗಿದೆ. ಸ್ವಾಮೀಜಿಯವರ ಪ್ರತ್ಯೇಕ ಭೇಟಿಗೆ ಅವಕಾಶ ಇರುವುದಿಲ್ಲ. ಮಠದಲ್ಲಿ ಏಪ್ರಿಲ್ 1 ರಂದು ಬೆಳಿಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಉಪಾಹಾರ, ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 11 ರವರೆಗೆ ಊಟದ ವ್ಯವಸ್ಥೆ ಮಾಡಲಾಗಿದೆ. ವಿಧಾನಸಭೆ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ರಾಜಕೀಯ ವ್ಯಕ್ತಿಗಳಿಗೆ ಆಹ್ವಾನ ನೀಡಲಾಗಿಲ್ಲ. ಆದರೆ, ಗಣ್ಯರು, ರಾಜಕಾರಣಿಗಳು ಆಗಮಿಸಿ ಶ್ರೀಗಳ ಆಶೀರ್ವಾದ ಪಡೆಯಬಹುದಾಗಿದೆ. ಊಟ, ವಸತಿ, ಶಿಕ್ಷಣ ಹೀಗೆ ತ್ರಿವಿಧ ದಾಸೋಹದ ಮೂಲಕ ಲಕ್ಷಾಂತರ ಮಂದಿಯ ಬಾಳಿಗೆ ಬೆಳಕಾದವರು ಸಿದ್ಧಗಂಗಾ ಶ್ರೀಗಳು. ಅವರ 111 ನೇ ಜನ್ಮ ದಿನೋತ್ಸವವನ್ನು ವಿಶೇಷವಾಗಿ ಆಚರಿಸಲು ಭಕ್ತರು ಸಜ್ಜಾಗಿದ್ದಾರೆ.
Comments