ಖಾಸಗಿ ಶಾಲೆಗಳ ದುಬಾರಿ ಡೊನೇಷನ್ ಗೆ ಕಡಿವಾಣ ಹಾಕಲು ಮುಂದಾದ ಶಿಕ್ಷಣ ಇಲಾಖೆ

ಖಾಸಗಿ ಶಾಲೆಗಳಲ್ಲಿ ದುಬಾರಿ ಡೊನೇಷನ್ ಪಡೆಯಲಾಗುತ್ತಿದೆ ಎಂಬ ವ್ಯಾಪಕ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಪಡೆಯುವ ಶುಲ್ಕದ ಮಾಹಿತಿಗಳನ್ನು ಕಡ್ಡಾಯವಾಗಿ ಸೂಚನಾ ಫಲಕದಲ್ಲಿ ಪ್ರಕಟಿಸಬೇಕೆಂದು ಸೂಚಿಸಿದೆ.
ಕರ್ನಾಟಕ ಶಿಕ್ಷಣ ಕಾಯ್ದೆ -1983 ರ ತಿದ್ದುಪಡಿಯಂತೆ ಸಿ.ಬಿ.ಎಸ್.ಇ., ಐ.ಸಿ.ಎಸ್.ಇ. ಶಾಲೆಗಳನ್ನು ಕೂಡ ಶುಲ್ಕ ನಿಗದಿಗೆ ಸಂಬಂಧಿಸಿದ ನಿಯಮಗಳ ವ್ಯಾಪ್ತಿಗೆ ಒಳಪಡಿಸಲಾಗಿದೆ. ರಾಜ್ಯ ಪಠ್ಯ ಕ್ರಮ, ಸಿ.ಬಿ.ಎಸ್.ಇ., ಐ.ಸಿ.ಎಸ್.ಇ. ಪಠ್ಯಕ್ರಮಗಳನ್ನು ಅನುಸರಿಸುತ್ತಿರುವ ಎಲ್ಲಾ ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭದ ಮೊದಲೇ ಶುಲ್ಕದ ಮಾಹಿತಿಗಳನ್ನು ಪ್ರಕಟಿಸುವುದು ಕಡ್ಡಾಯವಾಗಿದೆ. ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಈ ಕುರಿತು ಆದೇಶ ಹೊರಡಿಸಿದ್ದು, ಶಾಲೆಗಳಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು. ತಪ್ಪಿದಲ್ಲಿ ಶಾಲೆಯ ಮಾನ್ಯತೆಯನ್ನು ರದ್ದುಪಡಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
Comments