ಶಿವರಾಜ್ ಪಾಟೀಲ್, ಮಾನಪ್ಪ ವಜ್ಜಲ್ ಸ್ಪರ್ಧೆ ನಿಷೇಧಕ್ಕೆ ಹೈಕೋರ್ಟನಲ್ಲಿ ಅರ್ಜಿ

ಜೆಡಿಎಸ್ ಪಕ್ಷಕ್ಕೆ ನೀಡಿರುವ ರಾಜೀನಾಮೆ ಅಂಗೀಕಾರಕ್ಕೂ ಮುನ್ನ ಬಿಜೆಪಿ ಸೇರ್ಪಡೆಗೊಂಡ ರಾಯಚೂರು ಜಿಲ್ಲೆಯ ಮಾಜಿ ಶಾಸಕರಾದ ಶಿವರಾಜ್ ಪಾಟೀಲ್ ಹಾಗೂ ಮಾನಪ್ಪ ವಜ್ಜಲ್ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರು ಸೋಮವಾರ ಅರ್ಜಿ ಸಲ್ಲಿಸಿದ್ದು, ಮುಂದಿನ 2-3 ದಿನಗಳಲ್ಲಿ ವಿಚಾರಣೆಗೆ ಬರಲಿದೆ.
ರಾಯಚೂರು ಹಾಗೂ ಲಿಂಗಸಗೂರು ಕ್ಷೇತ್ರಗಳಿಂದ ಜೆಡಿಎಸ್ ಪಕ್ಷದಿಂದ ಆಯ್ಕೆಯಾಗಿದ್ದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ರಾಜೀನಾಮೆ ಅಂಗೀಕಾರವಾಗುವ ಮುನ್ನವೇ ಅವರು ಬೇರೆ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಹಾಗಾಗಿ ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಅವರಿಗೆ ನಿಷೇಧ ಹೇರಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
Comments