ಕಾವೇರುತ್ತಿರುವ 'ಕಾವೇರಿ ವಿವಾದ'ಕ್ಕೆ ತಮಿಳು ನಾಡಿನಲ್ಲಿ ಬಂದ್ ಕರೆ...!
ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಆಗ್ರಹಿಸಿ ಇಂದು ತಮಿಳುನಾಡು ರಾಜ್ಯದ್ಯಂತ ಬಂದ್ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಜ್ಯದಿಂದ ತಮಿಳುನಾಡಿಗೆ ತೆರಳುವ ಎಲ್ಲಾ ಕೆಎಸ್‌ಆರ್'ಟಿಸಿ ಬಸ್ ಗಳನ್ನು ಹಾಗೂ ವಾಹನಗಳ ಸಂಚಾರಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಬಸ್ ಗಳ ಸಂಚಾರವನ್ನು ಸ್ಥಗಿತಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಬಂದ್ ವೇಳೆ ಕಿಡಿಗೇಡಿಗಳು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸುವ ಅಥವಾ ಬೆಂಕಿ ಹಚ್ಚುವ ಸಾಧ್ಯತೆಗಳಿದ್ದು, ಪರಿಸ್ಥಿತಿ ಅವಲೋಕಿಸಿ ಬಸ್ ಗಳ ಕಾರ್ಯಾಚರಣೆ ಆರಂಭಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರ ಹಾಗೂ ವಾಹನಗಳ ಸುರಕ್ಷತೆ ಹಿನ್ನಲೆಯಲ್ಲಿ ಇಂದು ಪ್ರವಾಸಿ ವಾಹನಗಳ ಸಂಚಾರವನ್ನೂ ಸ್ಥಗಿತಗೊಳಿಸಲಾಗಿದೆ ಎಂದು ಬೆಂಗಳೂರು ಪ್ರವಾಸಿ ವಾಹನಗಳ ಸಂಘದ ಅಧ್ಯಕ್ಷ ರಾಧಾಕೃಷ್ಣಹೊಳ್ಳ ಅವರು ತಿಳಿಸಿದ್ದಾರೆ.
Comments