ಬಾಲಿವುಡ್ ಬ್ಯಾಡ್ ಬಾಯ್ ಗೆ ಕೊನೆಗೂ ಸಿಕ್ತು ಬಿಗ್ ರಿಲೀಫ್

ಬಾಲಿವುಡ್ ನ ಬ್ಯಾಡ್ ಬಾಯ್ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ 5 ವರ್ಷ ಶಿಕ್ಷೆಗೆ ಒಳಗಾಗಿದ್ದ ಹಿನ್ನಲೆಯಲ್ಲಿ ಕೊನೆಗೂ ಷರತ್ತು ಬದ್ಧ ಜಾಮೀನು ಸಿಕ್ಕಿದೆ.
ನ್ಯಾಯಾಧೀಶ ರವೀಂಧರ್ ಜೋಶಿ ಅವರು ಸಲ್ಮಾನ್ ಖಾನ್ ಗೆ ಜಾಮೀನು ತೀರ್ಪುನ್ನು ನೀಡಿದ್ದಾರೆ. 50 ಸಾವಿರ ರೂ. ಎರಡು ಬಾಂಡ್ ಗಳನ್ನು ಸಲ್ಲಿಸಬೇಕಾಗಿದೆ. 1998ರಲ್ಲಿ ‘ಹಮ್ ಸಾಥ್ ಸಾಥ್ ಹೈ’ ಸಿನಿಮಾದ ಚಿತ್ರೀಕರಣ ವೇಳೆ ಸಲ್ಮಾನ್ ಕೃಷ್ಣಮೃಗ ಬೇಟೆಯಾಡಿದ್ದರು. ಈ ವಿಷಯವಾಗಿ ಜೋಧಪುರ ಸಿಜೆಎಂ ಕೋರ್ಟ್ ಸಲ್ಮಾನ್ ದೋಷಿ ಅಂತಾ ಪರಿಗಣಿನೆಯನ್ನು ಮಾಡಿ 10 ಸಾವಿರ ರೂ. ದಂಡ ಮತ್ತು 5 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ಪ್ರಕರಣದ ಇತರೆ ಆರೋಪಿಗಳಾದ ಸೈಫ್ ಆಲಿ ಖಾನ್, ಟಬು, ನೀಲಂ, ಸೋನಾಲಿ ಬೇಂದ್ರೆ ಸೇರಿದಂತೆ ಆರು ಜನರನ್ನು ಕೋರ್ಟ್ ಖುಲಾಸೆಗೊಳಿಸಿ ಆದೇಶವನ್ನು ಹೊರಡಿಸಿತ್ತು. ಇಂದು ಸಂಜೆಯೊಳಗೆ ಎಲ್ಲ ರೀತಿಯ ಕಾನೂನು ನಿಯಮಗಳು ಪೂರ್ಣವಾದ್ರೆ ಬ್ಯಾಡ್ ಬಾಯ್ ಇಂದೇ ಜೈಲಿನಿಂದ ಹೊರಬರಲಿದ್ದಾರೆ. ಇಲ್ಲವಾದರೆ ಸೋಮವಾರ ಸಲ್ಮಾನ್ ಖಾನ್ ಜೈಲಿನಿಂದ ಹೊರಬರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
Comments