ನೀವಿನ್ನು ವೋಟಿಂಗ್ ಕಾರ್ಡ್ ಮಾಡಿಸಿಲ್ವಾ ಹಾಗಿದ್ರೆ ನಾಳೆ ಮಿಸ್ ಮಾಡ್ದೆ ಮಾಡಿಸ್ಕೊಳಿ
ಭಾರತ ಚುನಾವಣಾ ಆಯೋಗ ನಾಳೆ ರಾಜ್ಯದ ಎಲ್ಲ ಮತಗಟ್ಟೆಗಳಲ್ಲಿ ಮತದಾರರ ಮಿಂಚಿನ ನೋಂದಣಿ ಅಭಿಯಾನವನ್ನು ಹಮ್ಮಿಕೊಂಡಿದೆ. ನಾಳೆ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೂ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ಲ ಮತಗಟ್ಟೆಗಳಲ್ಲಿ ಈ ಅಭಿಯಾನ ಕಾರ್ಯ ಹಮ್ಮಿಕೊಂಡಿದ್ದು , ಯಾವ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದೆಂಬ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಂಡಿರುವುದಾಗಿ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
2018ರ ಜನವರಿ 1ಕ್ಕೆ 18 ವರ್ಷ ತುಂಬಿದ ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅರ್ಹರಾಗಿರುತ್ತಾರೆ. ವಯಸ್ಸಿಗೆ ಸಂಬಂಧಿಸಿದ ದಾಖಲಾತಿಗಳಾದ ಶಾಲಾ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾಸ್ ಪೋರ್ಟ್ ಜೊತೆಗೆ ವಾಸಸ್ಥಳ ದಾಖಲಾತಿಗಳಾದ ಪಡಿತರ ಚೀಟಿ, ವಿದ್ಯುತ್ ಬಿಲ್, ಮನೆ ಬಾಡಿಗೆ ಕರಾರು ಪತ್ರ, ಬ್ಯಾಂಕ್ ಪಾಸ್ ಬುಕ್, ಚಾಲನಾ ಪರವಾನಗಿ ಪತ್ರ ಮತ್ತಿತರೆ ದಾಖಲೆ ಒದಗಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಿಕೊಳ್ಳಬುದಾಗಿದೆ.
Comments