ಮದ್ಯ ಪ್ರಿಯರು, ಬಾರ್ ಮಾಲೀಕರಿಗೆ ತಟ್ಟಿದ ಚುನಾವಣೆಯ ಬಿಸಿ..!

ಬಾರ್ ಗಳ ಮಾಲೀಕರು ಈ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಭರ್ಜರಿ ವಹಿವಾಟಿನ ನಿರೀಕ್ಷೆಯಲ್ಲಿದ್ದಾರೆ. ಆದರೆ, ಚುನಾವಣಾ ಆಯೋಗ ನೀಡಿರುವ ನೋಟಿಸ್ ನಿಂದಾಗಿ ಬಾರ್ ಮಾಲೀಕರು ಕಂಗಾಲಾಗಿದ್ದಾರೆ. x
ಬಾರ್ ಗಳ ಮಾಲೀಕರು ಈ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಭರ್ಜರಿ ವಹಿವಾಟಿನ ನಿರೀಕ್ಷೆಯಲ್ಲಿದ್ದಾರೆ. ಆದರೆ, ಚುನಾವಣಾ ಆಯೋಗ ನೀಡಿರುವ ನೋಟಿಸ್ ನಿಂದಾಗಿ ಬಾರ್ ಮಾಲೀಕರು ಕಂಗಾಲಾಗಿದ್ದಾರೆ. ನೀತಿಸಂಹಿತೆ ಉಲ್ಲಂಘನೆಯಾಗದಂತೆ ಸುಗಮವಾಗಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಮದ್ಯದ ಹೊಳೆಗೆ ಕಡಿವಾಣ ಹಾಕಲು ಮುಂದಾಗಿದೆ. ಕೆಲವು ಬಾರ್ ಗಳ ಮಾಲೀಕರಿಗೆ ನೋಟಿಸ್ ನೀಡಲಾಗಿದೆ.
ಮದ್ಯ ಎಷ್ಟು ಪ್ರಮಾಣದಲ್ಲಿ ಮಾರಾಟವಾಗಿದೆ ಎಂಬ ಮಾಹಿತಿಯನ್ನು ಅಬಕಾರಿ ಇಲಾಖೆ ಮೂಲಕ ನೀಡುವಂತೆ ಸೂಚಿಸಲಾಗಿದೆ. ಚುನಾವಣೆ ಅವಧಿಯಲ್ಲಿ, ಈ ತಿಂಗಳಲ್ಲಿ ಮಾರಾಟವಾದ ಮದ್ಯ ಮತ್ತು ಕಳೆದ ವರ್ಷ ಇದೇ ಅವಧಿಯಲ್ಲಿ ಮಾರಾಟವಾದ ಮದ್ಯದ ವಿವರ ನೀಡಲು ತಿಳಿಸಲಾಗಿದೆ. ನಿಯಮ ಮೀರಿ ಜಾಸ್ತಿ ಮದ್ಯ ಮಾರಾಟ ಮಾಡುವ ಬಾರ್ ಗಳ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಇದರಿಂದಾಗಿ ಬಾರ್ ಮಾಲೀಕರು ಕಂಗಾಲಾಗಿದ್ದಾರೆ ಎಂದು ಹೇಳಲಾಗಿದೆ.
Comments