ಇದೇ ಪ್ರಥಮ ಬಾರಿಗೆ ಎಂಬಿಬಿಎಸ್ ಫೇಲ್ ಆದವರಿಗೂ ಪೂರಕ ಪರೀಕ್ಷೆ!
ಎಸ್ ಎಸ್ ಎಲ್ ಸಿ ಅಥವಾ ಪಿಯುಸಿ ಫೇಲ್ ಆದರೆ ಅಂತವರಿಗೆ ಪೂರಕ ಪರೀಕ್ಷೆಗಳನ್ನು ನಡೆಸಲಾಗುತ್ತಿತ್ತು. ಆದರೆ ಎಂಬಿಬಿಎಸ್ ಗೂ ಪೂರಕ ಪರೀಕ್ಷೆ ಪ್ರಥಮ ಬಾರಿಗೆ ಎಂಬಿಬಿಎಸ್ ಫೇಲ್ ಆದವರಗೆ ಪೂರಕ ಪರೀಕ್ಷೆ ನಡೆಯುತ್ತಿರುವುದು ಇದೆ ಪ್ರಥಮ ಬಾರಿಗೆ.
ಪ್ರಪ್ರಥಮ ಬಾರಿಗೆ ಎಂಬಿಬಿಎಸ್ ಮೊದಲ ವರ್ಷದಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಭವಿಷ್ಯದ ದೃಷ್ಟಿಯಿಂದ ಫಲಿತಾಂಶ ಪ್ರಕಟವಾದ ಎರಡು ತಿಂಗಳಿನ ಒಳಗೆ ಪೂರಕ ಪರೀಕ್ಷೆ ನಡೆಸಲಾಗುತ್ತಿದೆ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಎಂ.ಕೆ. ರಮೇಶ್ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂರಕ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳು ನೇರವಾಗಿ ಎರಡನೇ ವರ್ಷದ ಕೋರ್ಸಿಗೆ ಪ್ರವೇಶ ಪಡೆದು ಒಂದು ವರ್ಷದ ಸಮಯದ ನಷ್ಟವನ್ನು ತಪ್ಪಿಸಲಾಗುತ್ತಿದೆ ಎಂದರು.ಇದನ್ನೆಲ್ಲಾ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮಾಡಲಾಗುತ್ತಿದೆ
Comments