ಚಿನ್ನ ಖರೀದಿಸುವ ಗ್ರಾಹಕರಿಗೆ ಗುಡ್ ನ್ಯೂಸ್...!!

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಏರಿಳಿತವಾಗುತ್ತಲೇ ಇರುತ್ತದೆ. ಚಿನ್ನದ ಬೇಡಿಕೆ ಕುಸಿದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. 10 ಗ್ರಾಂ ಚಿನ್ನಕ್ಕೆ 75 ರೂ. ಇಳಿಕೆಯಾಗಿದೆ. ಇದರಿಂದ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನಕ್ಕೆ 31,280 ರೂ.ಗೆ ಇಳಿದಿದೆ.
ಆಭರಣ ತಯಾರಕರು ಮತ್ತು ಖರೀದಿದಾರರಿಂದ ಬೇಡಿಕೆ ಕಡಿಮೆಯಾದ ಕಾರಣ, ಚಿನ್ನದ ಬೆಲೆ ಪ್ರತಿ 10 ಗ್ರಾಂ ಗೆ 75 ರೂ. ಕಡಿಮೆಯಾಗಿ, 31,280 ರೂ.ಗೆ ಇಳಿದಿದೆ. ಸ್ಥಳೀಯ ಮಾರುಕಟ್ಟೆಗಳಲ್ಲಿ ಇದರಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಇದರಿಂದ ಚಿನ್ನದ ಬೆಲೆಯಲ್ಲಿ ಶೇ.0.24ರಷ್ಟು ಇಳಿಕೆಯಾದಂತಾಗಿದೆ. ಒಂದು ವಾರದಲ್ಲಿ ಜಾಗತಿಕವಾಗಿ ಚಿನ್ನದ ಬೇಡಿಕೆ ಕುಸಿದಿರುವುದೇ ಬೆಲೆ ಇಳಿಕೆಗೆ ಪ್ರಮುಖ ಕಾರಣವಾಗಿದೆ.
Comments