ಇಂದಿನಿಂದ ರಾಜಧಾನಿಯಲ್ಲಿ ಮಳೆಯಾಗುವ ಸಾಧ್ಯತೆ
ಇಂದಿನಿಂದ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರದಿಂದ ಮುಂದಿನ ಕೆಲ ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಈಗಾಗಲೇ ನೀಡಿದೆ.
ಕಳೆದ ಕೆಲ ದಿನಗಳಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ಏ.14 ಮತ್ತು 15ರಂದು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲೂ ಸಂಜೆ ಅಥವಾ ರಾತ್ರಿ ವೇಳೆ ಒಂದೆರಡು ಭಾರಿ ಹಗುರ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
Comments