ಸಲ್ಮಾನ್ ಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್

ಇತ್ತೀಚೆಗಷ್ಟೇ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮನ್ನಿಸಿದ ನ್ಯಾಯಾಲಯ, ವಿದೇಶಕ್ಕೆ ತೆರಳಲು ಅನುಮತಿಯನ್ನು ನೀಡಲಾಗಿದೆ. ಕೆಲವು ವೈಯಕ್ತಿಕ ಕಾರಣಗಳಿಂದ ನಾಲ್ಕು ದೇಶಗಳಿಗೆ ತೆರಳಬೇಕಿದೆ ಎಂದು ಅರ್ಜಿಯಲ್ಲಿ ತಿಳಿಸಿರುವ ಸಲ್ಮಾನ್ ಖಾನ್, ಕೋರ್ಟಿನಲ್ಲಿ ಅನುಮತಿಯನ್ನು ಕೇಳಿದ್ದರು.
1998 ರ ಸಿನಿಮಾ ಚಿತ್ರೀಕರಣವೊಂದರ ಸಮಯದಲ್ಲಿ ಕೃಷ್ಣಮೃಗವನ್ನು ಕೊಂದ ಆರೋಪದ ಮೇಲೆ ಜೋಧಪುರ ನ್ಯಾಯಾಲಯ ಸಲ್ಮಾನ್ ಅವರನ್ನು ದೋಷಿ ಎಂದು ಪರಿಗಣಿಸಿತ್ತು, ಹಾಗೂ ಅವರಿಗೆ ಐದು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ಕೂಡ ವಿಧಿಸಿತ್ತು. ಆದರೆ ನಂತರ ಜೋಧಪುರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಅವರಿಗೆ ಜಾಮೀನುನನ್ನು ಮಂಜೂರು ಮಾಡಿತ್ತು. 25,000 ರೂಪಾಯಿ ಮೊತ್ತದ ಎರಡು ವೈಯಕ್ತಿಕ ಬಾಂಡ್ , ಸಿನಿಮಾ ಚಿತ್ರೀಕರಣ ಅಥವಾ ಇತರೆ ವೈಯಕ್ತಿಕ ಕಾರಣಗಳಿಗಾಗಿ ವಿದೇಶಕ್ಕೆ ತೆರಳಬೇಕೆಂದರೆ ನ್ಯಾಯಾಲಯದಿಂದ ಅನುಮತಿ ಪಡೆಯುವುದು ಎಂಬ ಷರತ್ತಿನ ಮೇಲೆ ಅವರಿಗೆ ಜಾಮೀನು ನೀಡಲಾಗಿತ್ತು.
Comments