ನೀವು ಸರ್ಕಾರಿ ನೌಕರಿಯಲ್ಲಿದ್ದೀರಾ? ಹಾಗಾದ್ರೆ ಸಿಕ್ತು ಅನ್ಕೊಳ್ಳಿ ಬಂಪರ್ ಆಫರ್

ಅಕ್ಷಯ ತೃತೀಯ ಹಬ್ಬದ ಸಂಭ್ರಮದ ಜೊತೆ ಜೊತೆಯಲ್ಲಿಯೆ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಸಿಗಬೇಕಿದ್ದ ವೇತನ ಏರಿಕೆಗೆ ತಡೆ ನೀಡಲಾಗಿತ್ತು. ಆದರೆ, ಕೇಂದ್ರ ಚುನಾವಣಾ ಆಯೋಗವು ವೇತನ ಏರಿಕೆ ಶಿಫಾರಸ್ಸು ಜಾರಿಗೊಳಿಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ.
ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ವೇತನ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಶಿಫಾರಸ್ಸಿಗೆ ಈಗಾಗಲೇ ಅಸ್ತು ಎಂದಿದೆ. 6ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗಳಿಸಲು ಸರ್ಕಾರ ಮುಂದಾಗಿತ್ತು. ಆದರೆ, ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಸರ್ಕಾರಿ ಆದೇಶ ಜಾರಿಗೊಂಡಿರಲಿಲ್ಲ.ಇದರ ಮೂಲಕ 'ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ.ಆಯೋಗದ ಶಿಫಾರಸ್ಸಿನಂತೆ ಏಪ್ರಿಲ್ 01,2018ರಿಂದ ಜಾರಿಗೆ ಬರುವಂತೆ ಸೌಲಭ್ಯಗಳು ಸಿಗಲಿವೆ. ಐಎಎಸ್ ನಿವೃತ್ತ ಅಧಿಕಾರಿಯಾದ ಎಂ.ಆರ್. ಶ್ರೀನಿವಾಸ ಮೂರ್ತಿ ಅಧ್ಯಕ್ಷತೆಯ ಆಯೋಗವು ಜನವರಿ 31, 2018ರಂದು ಸಲ್ಲಿಸಿರುವ ವರದಿ ಹಾಗೂ ಶಿಫಾರಸ್ಸು ಅನುಷ್ಠಾನಗೊಳ್ಳಲಿದೆ ಎಂದು ತಿಳಿದುಬಂದಿದೆ.
Comments