ಮಾದ್ಯಮದವರ ಮೇಲೆ ಗರಂ ಆದ ಸಿ.ಎಂ ಸಿದ್ದರಾಮಯ್ಯ

ಬಾದಾಮಿ ಕ್ಷೇತ್ರದ ಅಭ್ಯರ್ಥಿಯ ವಿಚಾರದಲ್ಲಿ ಗೊಂದಲ ಇರುವುದು ನಮಗೆ ಹೊರತು ನಿಮಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರ ವಿರುದ್ಧ ಗರಂ ಆದರು.
ರಾಮಕೃಷ್ಣ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ವೇಳೆ ಬಾದಾಮಿ ವಿಷಯ ಮಾತಾಡುತ್ತಿದ್ದಂತೆ ಸಿದ್ದರಾಮಯ್ಯ ಗರಂ ಆಗಿದ್ದಾರೆ.ಬಾದಾಮಿಯಲ್ಲಿ ಸ್ಪರ್ಧಿಸುವ ವಿಚಾರ ಹೈಕಮಾಂಡ್‍ಗೆ ಬಿಟ್ಟಿದ್ದು. ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆ ಬೇಡವೆ ಎಂಬುದನ್ನು ವರಿಷ್ಠರೇ ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ .ನಾನು ಹೈಕಮಾಂಡ್ ಅಲ್ಲ ರಾಜ್ಯದ ಮುಖ್ಯಮಂತ್ರಿ ಅಷ್ಟೆ ಎಂದರು. ಹಾಲಿ ಕೆಲವು ಶಾಸಕರಿಗೆ ಟಿಕೆಟ್ ನೀಡಿಲ್ಲವಲ್ಲ ಎಂಬ ವರದಿಗಾರರ ಪ್ರಶ್ನೆಗೆ ಹೈಕಮಾಂಡ್ ಈ ಕುರಿತು ಪರಿಶೀಲನೆ ನಡೆಸುತ್ತಿದೆ.
Comments