ಹುಟ್ಟಿದ ಹಬ್ಬದಂದು ಉಪವಾಸ ಕೈಗೊಂಡ ಆಂಧ್ರ ಸಿ.ಎಂ

ಹುಟ್ಟಿದ ಹಬ್ಬದ ದಿನ ಸಾಮಾನ್ಯವಾಗಿ ಎಲ್ಲರೂ ಕೂಡ ಬೆಳಿಗ್ಗೆ ಬೇಗ ಎದ್ದು ದೇವಸ್ಥಾನಕ್ಕೆ ಪೂಜೆ ಪುನಷ್ಕಾರ ಅಂತಮಾಡಿಸಿ ತಮ್ಮ ತಮ್ಮ ಕೆಲಸಗಳನ್ನು ಮಾಡಿಕೊಳ್ಳುತ್ತಾರೆ. ಆದರೆ ಆಂದ್ರಪ್ರದೇಶದ ಮುಖ್ಯಮಂತ್ರಿ ವಿಭಿನ್ನವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಇಂದು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.ತಮ್ಮ ಹುಟ್ಟಿದ ದಿನವಾದ ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಉಪವಾಸ ಸತ್ಯಾಗ್ರಹದ ಮೂಲಕ ಹುಟ್ಟಿದ ಹಬ್ಬವನ್ನು ಆಚರಿಸಿಕೊಳ್ಳುತ್ತಿರುವುದು ವಿಶೇಷ ವಾಗಿದೆ.ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿ, ವಿಫಲರಾದ ಹಿನ್ನೆಲೆಯಲ್ಲಿಯೇ ಇಂದು ಉಪವಾಸ ಸತ್ಯಾಗ್ರಹವನ್ನು ಮಾಡುತ್ತಿದ್ದಾರೆ.
Comments