ರಾಜ್ಯದಲ್ಲಿ ನಾಳೆ ಬಾರಿ ಮಳೆಯಾಗುವ ಸಾದ್ಯತೆ

ರಾಜ್ಯದಲ್ಲಿ ನಾಳೆ ಬಾರಿ ಮಳೆಯಾಗುವ ಸಾದ್ಯತೆತೆಲಂಗಾಣದಿಂದ ತಮಿಳುನಾಡಿನವರೆಗೂ ಮೋಡಗಳ ಸಾಲು ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯಾದ್ಯಂತ ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆಯ ನಿರ್ದೇಶಕರಾದ ಶ್ರೀನಿವಾಸ್ ರೆಡ್ಡಿ ಮಳೆಯಾಗುವ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದ್ದಾರೆ.ಮಳೆಯ ಜೊತೆಗೆ ಗುಡುಗು, ಮಿಂಚು, ಗಾಳಿ ಬೀಸುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಕೂಡ ಮೋಡ ಕವಿದ ವಾತಾವರಣವಿರಲಿದ್ದು. ಅಲ್ಲಲ್ಲಿ ಚದುರಿದ ಮಳೆಯಾಗಲಿದೆ ಎಂದು ಶ್ರೀನಿವಾಸ್ ರೆಡ್ಡಿ ಮಾಹಿತಿಯನ್ನು ಈಗಾಗಲೇ ನೀಡಿದ್ದಾರೆ.
Comments