ಖಾಸಗಿ ಶಾಲೆಗಳಿಗೆ ಶುಲ್ಕ ನಿಗದಿ: ಶಾಲಿನಿ ರಜನೀಶ್
ಖಾಸಗಿ ಶಾಲೆಗಳ ಪ್ರವೇಶ ಶುಲ್ಕವನ್ನು ಈಗಾಗಲೇ ನಿಗದಿ ಮಾಡಲಾಗಿದ್ದು, ಪ್ರಸಕ್ತ ವರ್ಷದಿಂದಲೇ ಜಾರಿಗೆ ಬರಲಿದೆ . ಸಾಧ್ಯವಾಗುತ್ತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾದ ಶಾಲಿನಿ ರಜನೀಶ್ ತಿಳಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಇರುವುದರಿಂದ ಆದೇಶ ಹೊರಡಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾದ ಶಾಲಿನಿ ರಜನೀಶ್ ತಿಳಿಸಿದ್ದಾರೆ.ಈಗಾಗಲೇ ಶುಲ್ಕ ನಿಗದಿ ಮಾಡಲಾಗಿದ್ದು, ಕಾನೂನು ಇಲಾಖೆ ಒಪ್ಪಿಗೆಯನ್ನೂ ಈಗಾಗಲೆ ಪಡೆಯಲಾಗಿದೆ. ಶೈಕ್ಷಣಿಕ ವರ್ಷ ಪ್ರಾರಂಭಕ್ಕೆ ಹೊಸ ಶುಲ್ಕವು ನಿಗದಿಯಾಗಲಿದೆ. ಶಿಕ್ಷಣ ಹಕ್ಕು ಕಾಯ್ದೆ ಅಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರ ನೀಡುವುದು ಶಾಲಾ ಆಡಳಿತ ಮಂಡಳಿ ಜವಾಬ್ದಾರಿಯಾಗಿದೆ. ಇದಕ್ಕಾಗಿ ಪಾಲಕರಿಂದ ಹೆಚ್ಚುವರಿ ಶುಲ್ಕ ಪಡೆಯಬಾರದು ಎಂದು ಎಚ್ಚರಿಕೆಯನ್ನು ಕೂಡ ನೀಡಿದರು.
Comments