ಅಪ್ರಾಪ್ತ ಮಕ್ಕಳ ಅತ್ಯಾಚಾರಿಗಳಿಗೆ ಮರಣ ದಂಡನೆ – ಪೋಸ್ಕೋ ತಿದ್ದುಪಡಿಗೆ ಕೇಂದ್ರ ಚಿಂತನೆ
ಇತ್ತಿಚಿಗೆ ದೇಶ್ಯಾದ್ಯಂತ ಹೆಚ್ಚುತ್ತಿರುವ ಅಪ್ರಾಪ್ತ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳ ಮೇಲಿನ ಆಕ್ರೋಶಕ್ಕೆ ಕಿವಿಗೊಟ್ಟಿರುವ ಕೇಂದ್ರ ಸರ್ಕಾರ 12 ವರ್ಷಗಳ ಕೆಳಗಿನ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡಲು ಚಿಂತನೆಯನ್ನು ನಡೆಸಿದೆ.
ಈ ವಿಷಯಕ್ಕೆ ಪೂರಕವಾಗಿ ಈಗಾಗಲೇ ಜಾರಿಯಲ್ಲಿರುವ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಸ್ಕೋ) ಕಾಯ್ದೆಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಕುರಿತು ಶುಕ್ರವಾರ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿಯನ್ನು ಕೂಡ ನೀಡಿದೆ. ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾ.ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆಯನ್ನು ನಡೆಸಿ ಏಪ್ರಿಲ್ 27 ಕ್ಕೆ ವಿಚಾರಣೆಯನ್ನು ಮುಂದೂಡಿತು. ದೇಶದಲ್ಲಿ ಆಸಿಫಾ ಹಾಗೂ ಅಪ್ರಾಪ್ತ ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ತಮಗೆ ತೀವ್ರ ನೋವನ್ನು ಉಂಟು ಮಾಡಿದೆ. ಇಂತಹ ಪ್ರಕರಣಗಳನ್ನು ತಡೆಯಲು ಪೋಸ್ಕೋ ಕಾಯ್ದೆಯಲ್ಲಿ ತಿದ್ದುಪಡಿ ತರುವ ಕುರಿತು ಚಿಂತನೆ ನಡೆಸುವ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿಯನ್ನು ಕೂಡ ಹಂಚಿಕೊಂಡಿದ್ದರು.
Comments