ಇನ್ನೂ ಕೆಲವು ದಿನ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ

ರಾಜ್ಯದಲ್ಲಿ ಬೇಸಿಗೆಯ ಜೊತೆ ಜೊತೆಗೆ ಮಳೆ ಮುಂದುವರೆದಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯು ದಾಖಲಾಗಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಏ.25ರವರೆಗೂ ರಾಜ್ಯದ ಹಲವೆಡೆ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಮಳೆ ಮುಂದುವರೆಯುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಚಾಮರಾಜನಗರ, ಚಿತ್ರದುರ್ಗ, ಕೊಡಗು, ಮಂಡ್ಯ, ಮೈಸೂರು ಮತ್ತು ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರೆಡು ದಿನ ಭಾರಿ ಮಳೆ ಮುಂದುವರೆಯಲಿದ್ದು, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ ಮತ್ತು ರಾಯಚೂರಿನಲ್ಲಿ ಏ.23ರಂದು ಬಿರುಗಾಳಿ ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Comments