ಈ ವಾರ ಬೆಂಗಳೂರಿನಲ್ಲಿ ಫುಲ್ ಮಳೆಯಂತೆ..!
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿನ ನೆನ್ನೆ ಸಂಜೆ ಬಿರುಗಾಳಿ ಸಹಿತ ಮಳೆಯಾಗಿದೆ. ರಾಜಧಾನಿಯ ಹಲವೆಡೆ ಮರಗಳು ಧರೆಗುರುಳಿವೆ. ರಸ್ತೆಗಳಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ಕೂಡ ಉಂಟಾಗಿತ್ತು.
ನಗರದಲ್ಲಿ ಮಂಗಳವಾರ ಮಧ್ಯಾಹನದವರೆಗೆ ಮೋಡ ಕವಿದ ವಾತಾವರಣವಿದ್ದು, ಸಂಜೆ ಮಳೆಯಾಗಿದೆ. ನಗರ ಪ್ರದೇಶದಲ್ಲಿ 3.8 ಮಿ.ಮೀ ಮತ್ತು ವಿಮಾನ ನಿಲ್ದಾಣ ಪ್ರದೇಶದಲ್ಲಿ 6.8ಮಿ.ಮೀ ಮಳೆಯಾಗಿದೆ. ಮಾ.1ರಿಂದ ಏ.24ರವರೆಗೆ ನಗರದಲ್ಲಿ ಸರಾಸರಿ 96 ಮಿ.ಮೀ ಮಳೆ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಬುಧವಾರ ಗರಿಷ್ಠ 34ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.2 ಡಿಗ್ರಿ ಸೆಲ್ಸಿಯಸ್, ಕೆಐಎಎಲ್ ನಲ್ಲಿ ಗರಿಷ್ಠ 33.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್ ನಲ್ಲಿ ಗರಿಷ್ಠ 33.5ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬುಧವಾರ ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣ ಉಂಟಾಗಲಿದ್ದು ಸಂಜೆ ಮಳೆಯಾಗುವ ಸಾಧ್ಯತೆಯು ಕೂಡ ಇದೆ ಎಂದು ತಿಳಿಸಿದ್ದಾರೆ.
Comments