'ಸುಪ್ರೀಂ' ನವ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮಲ್ಹೋತ್ರಾ

ಇಂದು ಹಿರಿಯ ವಕೀಲರಾದ ಮಲ್ಹೋತ್ರಾ ಅವರು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ಮಲ್ಹೋತ್ರಾ ಅವರ ನೇಮಕಕ್ಕೆ ಕೇಂದ್ರ ಸರ್ಕಾರ ಇತ್ತಿಚಿಗಷ್ಟೆ ಅನುಮೋದನೆಯನ್ನು ನೀಡಿತ್ತು.
ಇಂದು ಮಲ್ಹೋತ್ರಾ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಕೊಲಿಜಿಯಂ ಶಿಫಾರಸು ಮಾಡಿತ್ತು. ಪ್ರಸ್ತುತ ಉತ್ತರಾಖಂಡ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿರುವ ಕೆ.ಎಂ. ಜೋಸೆಫ್ ಮತ್ತು ಹಿರಿಯ ವಕೀಲರಾದ ಮಲ್ಹೋತ್ರಾ ಅವರ ಹೆಸರನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ಪದನ್ನೋತಿಗಾಗಿ ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಿತ್ತು. ಆದರೆ, ಮಲ್ಹೋತ್ರಾ ಅವರ ಹೆಸರನ್ನು ಮಾತ್ರ ಕೇಂದ್ರ ಸರ್ಕಾರವು. ಅನುಮೋದಿಸಿತ್ತು. ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ನೇರವಾಗಿ ನೇಮಕವಾಗಲಿರುವ ಮೊದಲ ಮಹಿಳೆ ಎಂಬ ಹಿರಿಮೆ ಕೂಡ ಮಲ್ಹೋತ್ರಾ ಅವರಿಗೆ ಸಲ್ಲುತ್ತದೆ.
Comments