ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ..!

ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ.. ಪ್ರತಿ ಕ್ವಿಂಟಲ್ ಗೆ 5.5 ರೂ. ಉತ್ಪಾದನಾ ಸಬ್ಸಿಡಿಯನ್ನು ನೇರವಾಗಿ ಕಬ್ಬು ಬೆಳೆಗಾರರಿಗೆ ನೀಡಲು ಸರ್ಕಾರ ಈಗಾಗಲೇ ತೀರ್ಮಾನವನ್ನು ಮಾಡಿದೆ.
ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಕಬ್ಬು ಬೆಳೆಗಾರರಿಗೆ ಇದರಿಂದ ತುಂಬಾ ಅನುಕೂಲವಾಗುತ್ತದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲೇ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಉತ್ಪಾದನಾ ಸಬ್ಸಿಡಿಯನ್ನು ನೀಡಲು ಇದೀಗ ಮುಂದಾಗಿದೆ.ದಾಖಲೆ ಪ್ರಮಾಣದಲ್ಲಿ ಸಕ್ಕರೆಯು ಉತ್ಪಾದನೆ ಆಗಿದ್ದು, ಪ್ರತಿ ಕೆ.ಜಿ.ಗೆ 9 ರೂ.ನಷ್ಟು ಬೆಲೆ ಕಡಿಮೆಯಾಗಿ ಕಾರ್ಖಾನೆಗಳು ನಷ್ಟವನ್ನು ಅನುಭವಿಸುತ್ತಿವೆ. ಸಕ್ಕರೆ ಕಾರ್ಖಾನೆಗಳು 20,000 ಕೋಟಿ ರೂ. ನಷ್ಟು ಬಾಕಿಯನ್ನು ಕಬ್ಬು ಬೆಳೆಗಾರರಿಗೆ ನೀಡಬೇಕಿದೆ. 1540 ಕೋಟಿ ರೂ.ಗಳನ್ನು ಸರ್ಕಾರ ಸಬ್ಸಿಡಿ ರೂಪದಲ್ಲಿ ನೀಡಲಿದೆ. ಕಾರ್ಖಾನೆಗಳ ಪರವಾಗಿ ರೈತರ ಬ್ಯಾಂಕ್ ಖಾತೆಗೆ ಮೊತ್ತವನ್ನು ಜಮಾ ಮಾಡಲಾಗುವುದು ಎಂದು ಕೇಂದ್ರ ಸಚಿವ ರವಿಶಂಕರ ಪ್ರಸಾದ್ ಹೇಳಿದ್ದಾರೆ.
Comments