ಪಿಯು ವಿದ್ಯಾರ್ಥಿಗಳಿಗೆ ತಾತ್ಕಾಲಿಕ ಬಸ್ ಪಾಸ್ ಚಿಂತನೆ..!
ಈ ವರ್ಷದ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ತರಗತಿಗಳು ಮೇ ತಿಂಗಳಲ್ಲೇ ಆರಂಭವಾಗಿದೆ. ಹೀಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮಗಳಯು ಪರದಾಡುವಂತೆ ಮಾಡಿದೆ.
ವಿದ್ಯಾರ್ಥಿಗಳಿಗೆ ಪಾಸ್ ವಿತರಣೆ ವಿಷಯದಲ್ಲಿ ನಿಗಮಗಳು ಗೊಂದಲಕ್ಕೆ ಸಿಲುಕಿದ್ದು ತರಗತಿಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಪಾಸ್ ನೀಡಲು ಚಿಂತನೆಯನ್ನು ನಡೆಸಿವೆ. ಜೂನ್ ಬದಲಾಗಿ ಮೇ ತಿಂಗಳಲ್ಲೇ ದ್ವಿತೀಯ ಪಿಯು ತರಗತಿಗಳು ಪ್ರಾರಂಭಿಸಲು ಶಿಕ್ಷಣ ಇಲಾಖೆಯು ನಿರ್ಧಾರ ಮಾಡಿತ್ತು. ಪ್ರಸಕ್ತ ವರ್ಷದಲ್ಲಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡುವುದಾಗಿ ಸರ್ಕಾರ ಘೋಷಿಸಿದೆ. ಈ ಬಗ್ಗೆ ಪರಿಶೀಲನೆ ನಡೆಸಿದ ಸಾರಿಗೆ ನಿಗಮವು ಬಜೆಟ್‌ನಲ್ಲಿ ಘೋಷಿಸಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡುವ ಸಂಬಂಧ ಇದುವರೆಗೆ ರಾಜ್ಯ ಸರ್ಕಾರ ಯಾವುದೇ ಆದೇಶವನ್ನು ಹೊರಡಿಸಿಲ್ಲ. ಸರ್ಕಾರದ ಆದೇಶವಿಲ್ಲದೆ ಉಚಿತ ಬಸ್‌ಪಾಸ್ ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ಇದಕ್ಕೆ ಪೂರಕವಾಗಿ ಮೇ ತಿಂಗಳಲ್ಲೇ ಪಾಸ್ ವಿತರಿಸಲು ಸಾರಿಗೆ ಇಲಾಖೆಗೆ ಮನವಿಯನ್ನು ಕೂಡ ಸಲ್ಲಿಸಿತ್ತು.ಆದರೆ ಇನ್ನೂ ಈ ಸಮಸ್ಯೆಗೆ ಉತ್ತರ ಸಿಕ್ಕಿಲ್ಲ. ಪ್ರಸಕ್ತ ಬಜೆಟ್‌ನಲ್ಲಿ ಸರ್ಕಾರ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡುವುದಾಗಿ ಘೋಷಣೆ ಮಾಡಿದೆ. ಈ ಬಗ್ಗೆ ಆದೇಶ ಹೊರಡಿಸುವಂತೆ ಕೋರಿ ಸರ್ಕಾರಕ್ಕೆ ನಿಗಮಗಳು ಪತ್ರ ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ ಪಿಯು ವಿದ್ಯಾರ್ಥಿಗಳಿಗೆ ತಾತ್ಕಾಲಿಕ ಬಸ್ ಪಾಸ್ ನೀಡಲು ನಿಗಮವು ಚಿಂತನೆಯನ್ನು ನಡೆಸುತ್ತಿದೆ ಎಂದು ಹೇಳಲಾಗಿದೆ.
Comments