ವಿಧಾನಸಭಾ ಚುನಾವಣೆ ಹಿನ್ನಲೆ ಮೇ12ರಂದು ಸರ್ಕಾರಿ ರಜೆ ಘೋಷಣೆ
ರಾಜ್ಯ ರಾಜಕಾರಣದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ 12 ರಂದು ಮತದಾನಕ್ಕೆ ಅನುವಾಗುವಂತೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ಸರ್ಕಾರಿ ಹಾಗೂ ಶಾಲಾ ಕಚೇರಿಗಳು ಅನುದಾನಿತ ವಿದ್ಯಾಸಂಸ್ಥೆಗೂ ಸೇರಿ ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ, ಇತರೆ ಬ್ಯಾಂಕ್‌ಗಳು, ಸರ್ಕಾರಿ ಹಾಗೂ ಕೇಂದ್ರ ಸರ್ಕಾರದ ಕಾರ್ಖಾನೆ, ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ಸಂಘ, ಸಂಸ್ಥೆಗಳು ಸಿಬ್ಬಂದಿಗೆ ವೇತನ ಸಹಿತ ರಜೆ ನೀಡಬೇಕೆಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಪ್ರಧಾನ ಕಾರ್ಯದರ್ಶಿ ಇಲಾಖೆ ಮುಖ್ಯಸ್ಥರಿಗೆ ಈಗಾಗಲೇ ಸೂಚಿಸಿದ್ದಾರೆ.
Comments