ಮೇ 7 ಕ್ಕೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

ವಿದ್ಯಾರ್ಥಿಗಳ ಜೀವನದ ಬಹು ಮುಖ್ಯ ಘಟ್ಟ ಎಂದರೆ ಅದು ಎಸ್ ಎಸ್ ಎಲ್ ಸಿ. ಎಸ್ ಎಸ್ ಎಲ್ ಸಿ. ಫಲಿತಾಂಶ ಮೇ 7 ರಂದು ಪ್ರಕಟವಾಗಲಿದೆ.
ಮೇ 7 ರಂದು ಬೆಳಿಗ್ಗೆ 11 ಗಂಟೆಗೆ ವೆಬ್ ಸೈಟ್ ನಲ್ಲಿ 2017 -18 ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶವನ್ನು ಪ್ರಕಟಿಸಲಾಗುವುದು. ಮೇ 8 ರಂದು ಆಯಾ ಶಾಲೆಗಳಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುವುದು. www.karresults.nic.in ಮತ್ತು www.kseeb.kar.nic.in ವೆಬ್ ಸೈಟ್ ಗಳಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟವಾಗುತ್ತದೆ. 8.54 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದು, ಇದರಲ್ಲಿ ಶೇ. 2.73 ರಷ್ಟು ಅಭ್ಯರ್ಥಿಗಳು ಗೈರುಹಾಜರಾಗಿದ್ದರು. ಎಲ್ಲಾ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೂ ಆಲ್ ದಿ ಬೆಸ್ಟ್.
Comments