ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಇಂದು ಮಹತ್ತರವಾದ ದಿನ. ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಇಂದು ಬರುವ ಪಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಎಸ್ ಎಸ್ ಎಲ್ ಸಿ ಫಲಿತಾಂಶ ಇಂದು ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ತುಂಬಾ ಕುತೂಹಲದಿಂದ ಪಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆ ನಂತರ ಇಂಟರ್ ನೆಟ್ ನಲ್ಲಿ ಫಲಿತಾಂಶವನ್ನು ನೋಡಬಹುದು. kseeb.kar.nic.in ಅಥವಾ karresults.nic.in ವೆಬ್ ಸೈಟ್ ನಲ್ಲಿ ನೋಡಬಹುದು ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶವು ಪ್ರಕಟವಾಗಲಿದೆ.ಎಲ್ಲಾ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್.
Comments