ಇಂದು ‘ರವೀಂದ್ರನಾಥ ಠಾಗೋರ್’ ಅವರ ಹುಟ್ಟಿದ ದಿನ..!

07 May 2018 1:45 PM | General
490 Report

ರವೀಂದ್ರನಾಥ ಠಾಗೋರ್ ‌ಅವರು ೭ ಮೇ ೧೮೬೧  ಜನಿಸಿದರು.  ಅವರು ಬಂಗಾಳಿ ಮಹಾ ವಿದ್ವಾಂಶರು.  ಕವಿಗಳಾಗಿ, ಕಾದಂಬರಿಕಾರರಾಗಿ, ಸಂಗೀತಕಾರರಾಗಿ ಮತ್ತು ನಾಟಕ ರಚಿಸುವ ಮೂಲಕ ಅವರು ೧೯ನೇ ಶತಮಾನದ ಕೊನೆಯಲ್ಲಿ ಮತ್ತು ೨೦ನೇ ಶತಮಾನದ ಆರಂಭದಲ್ಲಿ ಬಂಗಾಳಿ ಸಾಹಿತ್ಯ ಮತ್ತು ಸಂಗೀತಕ್ಕೆ ಹೊಸ ರೂಪ ಕೊಟ್ಟರು.

ಅವರು ರಚಿಸಿದ "ಸೂಕ್ಷ್ಮ ಸಂವೇದನೆಯ, ನವನವೀನವೂ ಮತ್ತು ಸುಂದರವೂ ಆದ ಪದ್ಯ'ಗೀತಾಂಜಲಿ' ಕಾವ್ಯಕ್ಕೆ ೧೯೧೩ರ ನೊಬೆಲ್ ಸಾಹಿತ್ಯ ಪ್ರಶಸ್ತಿ ಸಿಕ್ಕಿತು. ಈ ಮೂಲಕ ಅವರು ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಏಷ್ಯಾದ ಮೊದಲಿಗರು ಎಂಬ ಗೌರವಕ್ಕೆ ಪಾತ್ರರಾದರು. ಕಲ್ಕತ್ತಾದ ಪಿರಾಲಿ ಬ್ರಾಹ್ಮಣ ಕುಟುಂಬಕ್ಕೆ ಸೇರಿದ ಟಾಗೋರ್ ‌ ತಮ್ಮ ಎಂಟನೇ ವಯಸ್ಸಿನಲ್ಲಿ ಪದ್ಯ ರಚನೆ ಆರಂಭಿಸಿದರು. ಹದಿನಾರನೇ ವಯಸ್ಸಿನಲ್ಲಿ ಅವರು ಭಾನುಶಿಂಘೊ ("ಸೂರ್ಯ ಸಿಂಹ") ಎಂಬ ಗುಪ್ತನಾಮದಡಿ ಮೊದಲ ಮಹತ್ವದ ಕವನವನ್ನು ಪ್ರಕಟಿಸಿದರು ಮತ್ತು ಅವರು ಮೊದಲು ಸಣ್ಣ ಕಥೆಗಳು ಮತ್ತು ನಾಟಕಗಳನ್ನು ೧೮೭೭ರಲ್ಲಿ ಬರೆದರು. ಬ್ರಿಟಿಷ್ ಆಡಳಿತವನ್ನು ಬಹಿರಂಗವಾಗಿ ಖಂಡಿಸಿದ ಟಾಗೋರ್‌ ಭಾರತೀಯ ಸ್ವಾತಂತ್ರ್ಯ ಚಳವಳಿಯನ್ನು ಬೆಂಬಲಿಸಿದರು. ಅವರು ಜಗತ್ತಿಗೆ ನೀಡಿದ ಬಹುದೊಡ್ಡ ಗ್ರಂಥಮಾಲೆ ಮತ್ತು ಅವರು ಸ್ಥಾಪಿಸಿದ ಸಂಸ್ಥೆ ವಿಶ್ವ ಭಾರತಿ ವಿಶ್ವ ವಿದ್ಯಾನಿಲಯ ಇವು ಅವರ ಪ್ರಮುಖ ಕೊಡುಗೆಗಳಾವೆ.

 

Edited By

Manjula M

Reported By

Manjula M

Comments