ತೂತುಕುಡಿಯಲ್ಲಿ ರೈತರ ಮೇಲೆ ಗೋಲಿಬಾರ್ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ

ತಮಿಳುನಾಡಿನ ತೂತುಕುಡಿಯಲ್ಲಿ ನಡೆಯುತ್ತಿರುವ ರೈತರ ಮೇಲಿನ ಗೋಲಿಬಾರ್ ಖಂಡಿಸಿ ಮೈಸೂರಿನಲ್ಲಿ ಎಡಪಕ್ಷಗಳ ಜಂಟಿ ಸಮಿತಿಯಿಂದ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ.
ಮೈಸೂರಿನ ರಾಮಸ್ವಾಮಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ವೇದಾಂತ ಕಂಪನಿಯ ಸ್ಟೆರ್ ಲೈಟ್ ಕಾರ್ಖಾನೆಯಿಂದ ಮಾಲಿನ್ಯವಿತ್ತು. ಇದನ್ನು ಖಂಡಿಸಿ ನೂರಾರು ದಿನಗಳಿಂದ ಪ್ರತಿಭಟನೆ ಕೂಡ ನಡೆಯುತ್ತಿದೆ. ಮೇ. 22 ರಂದು ಈ ವೇದಾಂತ ಕಂಪನಿಯ ಹೋರಾಟ ಉಗ್ರ ಸ್ವರೂಪವನ್ನು ಪಡೆದುಕೊಂಡಿತ್ತು. ಈ ವೇಳೆ ಪೊಲೀಸ್ ಗೋಲಿಬಾರ್ ನಲ್ಲಿ 12 ಮಂದಿ ರೈತರು ಕೂಡ ಸಾವನ್ನಪಿದ್ದಾರೆ. ಹಾಗಾಗಿಯೇ ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನಕಾರರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು.
Comments