ರಾಜ್ಯದಲ್ಲಿ ಇನ್ನೂ ಮುಂದುವರೆಯಲ್ಲಿ ವರುಣನ ಆರ್ಭಟ..!
ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಂಭವವಿದೆ. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವಂತಹ ಚಂಡಮಾರುತದ ನೇರ ಪರಿಣಾಮ ರಾಜ್ಯದ ಮೇಲೆ ಬೀರಿಲ್ಲ. ನಾಳೆಯ ವೇಳೆಗೆ ಚಂಡಮಾರುತದ ದುರ್ಬಲಗೊಳ್ಳಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.
ಮುಂಗಾರುಪೂರ್ವ ಮಳೆ ಕೊಡಗು, ಉಡುಪಿ, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ದಕ್ಷಿಣ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಭಾಗಶಃ ಮೋಡ ಕವಿದ ವಾತಾವರಣವಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದರು. ಈ ಬಾರಿ ಮೇ ತಿಂಗಳಲ್ಲಿ ಅತಿ ಹೆಚ್ಚಿನ ಮಳೆಯಾಗಿದೆ. ಮೇ 29ಕ್ಕೆ ಕೇರಳ ಕರಾವಳಿಯಲ್ಲಿ ಮುಂಗಾರು ಪ್ರವೇಶಿಸುವ ನಿರೀಕ್ಷೆ ಇದ್ದು, ಆನಂತರ ಒಂದೆರಡು ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಕಾಲಿಡಲಿದೆ ಎಂದು ತಿಳಿಸಿದ್ದಾರೆ.
Comments