ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಜೂನ್ 1 ರಂದು ಪ್ರಕಟ ಸಾಧ್ಯತೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂಜಿನಿಯರಿಂಗ್ ಹಾಗೂ ಇತರೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಿದಂತಹ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ ಫಲಿತಾಂಶ ಜೂನ್ 1 ಅಥವಾ 2 ರಂದು ಹೊರಬೀಳುವ ಸಾಧ್ಯತೆ ಇದೆ ಹಾಗೂ ಈ ವಿಷಯವಾಗಿ ಮಂಗಳವಾರ ಪ್ರಾಧಿಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಫ್ರೌಡಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ಏಪ್ರಿಲ್ 30ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಸಿಬಿಎಸ್‌ಇ 12 ನೇ ತರಗತಿ ಫಲಿತಾಂಶ ಮೇ 26ರಂದು ಪ್ರಕಟವಾಗಿತ್ತು. ಅಂತೆಯೇ ಇನ್ನು, ವೈದ್ಯ ಮತ್ತು ದಂತ ವೈದ್ಯ ಕೋರ್ಸ್ ಗಳ ಪ್ರವೇಶಕ್ಕಾಗಿ ಕೇಂದ್ರ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮೇ 6ರಂದು ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಜೂನ್ 5 ರಂದು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಜೂನ್ 12ರಿಂದ ಕೋರ್ಸ್‌ಗಳ ಪ್ರವೇಶಕ್ಕಾಗಿ ಕೌನ್ಸೆಲಿಂಗ್ ಕೂಡ ಪ್ರಾರಂಭವಾಗಲಿದೆ ಎಂದು ಮಂಡಳಿಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
Comments