ಕರಾವಳಿ ಕರ್ನಾಟಕ ಜನರಿಗಾಗಿ ಮೋದಿ ಮಾಡಿರುವ ಟ್ವೀಟ್ ನಲ್ಲಿ ಏನಿದೆ?



'ರಾಜ್ಯದ ಕೆಲವು ಭಾಗದ ಜನ ಪ್ರವಾಹದಿಂದ ತೊಂದರೆಗೆ ಸಿಲುಕಿದ್ದು ಅವರ ಸುರಕ್ಷತೆಗಾಗಿ ನಾನು ಪ್ರಾರ್ಥಿಸುತ್ತೇನೆ' ಎಂದಿರುವ ಮೋದಿಯವರು ಅಲ್ಲಿನ ಪರಿಸ್ಥಿತಿಯ ಬಗ್ಗೆ ಅಲ್ಲಿನ ಅಧಿಕಾರಿಗಳೊಡನೆ ಮಾತನಾಡುತ್ತೇನೆ ಸೂಕ್ತ ಸಹಾಯ ಒದಗಿಸುವಂತೆ ಸೂಚನೆ ನೀಡಿದ್ದೇನೆ ಎಂದು ಮೋದಿ ಹೇಳಿದ್ದಾರೆ.
ಕರಾವಳಿ ಜಿಲ್ಲೆಗಳ ಭಾಗಗಳಲ್ಲಿ ಆಗುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ಟರ್ ಮೂಲಕ ಸ್ಪಂದಿಸಿದ್ದಾರೆ. ಪ್ರಧಾನಿ ಮೋದಿ ಅವರು ಈ ಟ್ವೀಟ್ ಮಾಡಿದ ಕೇವಲ ಒಂದು ಗಂಟೆಯಲ್ಲಿ 900 ಬಾರಿ ರೀಟ್ವೀಟ್ ಆಗಿದೆ. 3294 ಜನ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದರು. ಹಲವು ಜನ ಪ್ರತಿಕ್ರಿಯೆಯನ್ನೂ ಕೂಡ ನೀಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಮಂಗಳೂರು ಜಿಲ್ಲೆಗಳಲ್ಲಿ ನಿನ್ನೆ ರಾತ್ರಿಯಿಂದ ಸುರಿದ ಭಾರಿ ಮಳೆಗೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿದೆ.ಕೆಲವು ಜೀವ ಕೂಡ ಬಲಿ ಆಗಿದೆ.
Comments