‘ಕನಸು’ ಚಿತ್ರದ ನಿರ್ದೇಶಕನ ಕನಸು ಸಾವಿನಲ್ಲಿ ಅಂತ್ಯ..!

ಕರಾವಳಿ ಭಾಗದಲ್ಲೆಲ್ಲಾ ಕಳೆದ 2 ದಿನಗಳಿಂದ ಸುರಿಯುತ್ತಿರುವ ಮಳೆಗೆ ಕನಸು ಚಿತ್ರದ ನಿರ್ದೇಶಕರಾದ ಸಂತೋಷ್ ಕುಮಾರ್ ಶೆಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಎರ್ಮಾಯ್ ಫಾಲ್ಸ್ ನಲ್ಲಿ ಫೋಟೋ ಶೂಟ್ ನಡೆಸುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಸಂತೋಷ್ ಕುಮಾರ್ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಫೋಟೋ ಶೂಟ್ ಮಾಡುತ್ತಿದ್ದ ವೇಳೆ ಜೋರಾಗಿ ಮಳೆ ಬಂದಿದ್ದು, ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ಕಾಲು ಜಾರಿ ಬಿದ್ದಿದ್ದಾರೆ. ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿಯು ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ವೇಳೆಯಲ್ಲಿ ನಿರ್ದೇಶಕ ಸಂತೋಷ್ ಕುಮಾರ್ ಶೆಟ್ಟಿ ಮೃತದೇಹ ಪತ್ತೆಯಾಗಿದೆ. ಸಂತೋಷ್ ಕುಮಾರ್ ಶೆಟ್ಟಿ 2015ರಲ್ಲಿ ಬಿಡುಗಡೆಯಾದ ಮಕ್ಕಳ ಚಲನ ಚಿತ್ರ 'ಕನಸು' ಚಿತ್ರವನ್ನು ನಿರ್ದೇಶಿಸಿದ್ದರು.
Comments