ರಾಜ್ಯದ ಜನತೆಗೆ ಗುಡ್ ನ್ಯೂಸ್ ಕೊಟ್ಟ ನೂತನ ಮೈತ್ರಿ ಸರ್ಕಾರ..!



ನೂತನ ಸಮ್ಮಿಶ್ರ ಸರ್ಕಾರವು, ಯಶಸ್ವಿನಿ ಯೋಜನೆಯನ್ನು ನಿಲ್ಲಿಸಲಾಗುವುದು ಎನ್ನುವ ಗೊಂದಲಗಳಿಗೆ ಬ್ರೇಕ್ ಹಾಕಿದ್ದು, ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಕನಸಿನ ಯೋಜನೆಯಾದ 'ಯಶಸ್ವಿನಿ' ಯೋಜನೆಯನ್ನು ಮತ್ತೆ ಮುಂದುವರಿಸಲು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಬುಧವಾರ ಮುಖ್ಯಮಂತ್ರಿಯಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಯಾದ ಡಾ.ಜಿ.ಪರಮೇಶ್ವರ್ ಭಾಗವಹಿಸಿದ್ದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು ಯಶಸ್ವಿನಿ ಯೋಜನೆಯ ಅವಧಿಯನ್ನು ಮುಕ್ತಾಯಗೊಳ್ಳುವುದರಿಂದ ಬಡವರು ವೈದ್ಯ ಸೌಲಭ್ಯದಿಂದ ವಂಚಿತರಾಗಬಹುದೆಂಬ ಆತಂಕ ಸದ್ಯದ ಮಟ್ಟಿಗೆ ದೂರವಾದಂತಾಗಿದೆ. ಕಳೆದ 10 ದಿನಗಳಿಂದ ಯಶಸ್ವಿನಿ ಹಾಗೂ ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತ ಮತ್ತು ರಿಯಾಯಿತಿ ದರದಲ್ಲಿ ವೈದ್ಯ ಸೇವೆ ಹಾಗೂ ಶಸ್ತ್ರ ಚಿಕಿತ್ಸೆ ಸೌಲಭ್ಯವನ್ನು ನಿರಾಕರಿಸಲಾಗುತಿತ್ತು. ಈ ಯೋಜನೆಯನ್ನು ಮುಂದುವರಿಸುವಂತೆ ಸಾರ್ವಜನಿಕರಿಂದ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ, ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಸಾರ್ವಜನಿಕರು ಇನ್ನೂ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳದ ಕಾರಣಕ್ಕೆ ಯಶಸ್ವಿನಿ ಯೋಜನೆಯನ್ನು ಮುಂದುವರಿಸಲು ಸಂಪುಟ ಸಭೆಯಲ್ಲಿ ನಿರ್ಧಾರವನ್ನು ಕೈತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
Comments