ಕಡಿಮೆ ದರದಲ್ಲಿ ಜನರಿಗೆ ಆರೋಗ್ಯ ಸೇವೆ ಸಿಗಬೇಕು : ಪ್ರಧಾನಿ ನರೆಂದ್ರ ಮೋದಿ

ಆರೋಗ್ಯ ಸರಿಯಿಲ್ಲದೇ ಅನಾರೋಗ್ಯ ಮತ್ತು ವಿವಿಧ ರೋಗಗಳಿಂದ ಬಳಲುಯ್ತಿರುವ ಬಡ ಹಾಗೂ ಮಧ್ಯಮ ವರ್ಗದ ಜನರ ಮೇಲೆ ಆರ್ಥಿಕ ಹೊರೆ ಹೆಚ್ಚಾಗುತ್ತಿದೆ. ಪ್ರತಿಯೊಬ್ಬ ಭಾರತೀಯನಿಗೂ ಕೂಡ ಕಡಿಮೆ ದರದಲ್ಲಿ ಆರೋಗ್ಯ ಸೇವೆ ಸಿಗುವಂತಾಗಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಪ್ರಯತ್ನವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಿಳಿಸಿದ್ದಾರೆ.
ಇಂದು ದೆಹಲಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಸ್ಟೆಂಟ್ಸ್ ಗಳ ಬೆಲೆಯನ್ನು ಗಣನೀಯವಾಗಿ ಇಳಿಕೆ ಮಾಡಲಾಗಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಬಹಳ ಪ್ರಯೋಜನವಾಗಿದೆ ಎಂದು ತಿಳಿಸಿದರು. ಆರೋಗ್ಯವು ಭಾರತ ನಿರ್ಮಾಣದಲ್ಲಿ ಸ್ವಚ್ಛ ಭಾರತ ಅಭಿಯಾನದ ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದರು. ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯ ಫಲಾನುಭವಿಗಳೊಂದಿಗೆ ಇಂದು ಬೆಳಗ್ಗೆ ನಮೋ ಆಪ್ ಮೂಲಕ ನೇರ ಸಂವಾದದಲ್ಲಿ ತಿಳಿಸಿದ್ದಾರೆ.
Comments