ಸರ್ಕಾರಿ ಬಸ್ ಪ್ರಯಾಣಿಕರಿಗೆ ಶಾಕಿಂಗ್ : ಬಸ್ ಪ್ರಯಾಣ ದರದಲ್ಲಿ ಹೆಚ್ಚಳ..!
ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಡೀಸೆಲ್ ಬೆಲೆ ಹಾಗೂ ಬಿಎಂಟಿಸಿ ಹಾಗೂ ಕೆ.ಎಸ್.ಆರ್.ಟಿಸಿ ಯ ನಿಗಮಕ್ಕೆ ಆಗುತ್ತಿರುವ ತೀವ್ರ ನಷ್ಟದಿಂದಾಗಿ ಬಿಎಂಟಿಸಿ ಬಸ್ ಪ್ರಯಾಣ ದರ ಹಚ್ಚಳ ಮಾಡುವುದಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ನಿಗಮಕ್ಕೆ ಎದುರಾಗಿರುವ ಸಂಕಷ್ಟದ ಹಿನ್ನೆಲೆಯಲ್ಲಿ ದರ ಹೆಚ್ಚಳ ಮಾಡದೆ ಬೇರೆ ದಾರಿಯೇ ಇಲ್ಲ, ದರ ಹೆಚ್ಚಳದ ಅನಿವಾರ್ಯತೆಯನ್ನು ಸರ್ಕಾರಕ್ಕೂ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ ಎಷ್ಟು ಹಣವನ್ನು ಹೆಚ್ಚಳ ಮಾಡಬೇಕು ಅಂತ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಹೇಳಲಾಗುತ್ತಿದೆ. ಇದಲ್ಲದೇ ಎಷ್ಟು ಪ್ರಮಾಣ ದರ ಏರಿಕೆ ಮಾಡಬಹುದು ಎನ್ನುವ ಲೆಕ್ಕ ಹಾಕಿ ವರದಿ ನೀಡುವಂತೆ ಸೂಚಿಸಿದ್ದಾರಂತೆ ಎಂದು ಹೇಳಲಾಗುತ್ತಿದೆ.
Comments