ಜೂ. 21ರಿಂದ ರಾಜ್ಯದೆಲ್ಲೆಡೆ ಎಸ್‌ಎಸ್ ಎಲ್ ಸಿ ಪೂರಕ ಪರೀಕ್ಷೆ
ರಾಜ್ಯದೆಲ್ಲೆಡೆ ಎಸ್‌ಎಸ್ ಎಲ್ ಸಿ ಪೂರಕ ಪರೀಕ್ಷೆಯು ಜೂ. 21 ರಿಂದ ಪ್ರಾರಂಭವಾಗಲಿದೆ. ಪರೀಕ್ಷೆಯನ್ನು ವ್ಯಸ್ಥಿತವಾಗಿ ನಡೆಸಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಂಡಿದೆ.
ಈ ಬಾರಿ ಒಟ್ಟು 1,32,543 ಬಾಲಕರು ಹಾಗೂ 73,370 ಬಾಲಕಿಯರು ಸೇರಿದಂತೆ ಒಟ್ಟು 2,07,913 ವಿದ್ಯಾರ್ಥಿಗಳು ಎಸ್‌ಎಸ್ ಎಲ್ ಸಿ ಪೂರಕ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಾಗಿ ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಿಂದ ಒಟ್ಟು 673 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು,ಇದರಲ್ಲಿ 11 ಅತಿ ಸೂಕ್ಷ್ಮ ಮತ್ತು 645 ಸಾಮಾನ್ಯ ಪರೀಕ್ಷಾ ಕೇಂದ್ರಗಳಾಗಿವೆ. 9 ಜಿಲ್ಲೆಗಳಲ್ಲಿ 54 ಮೌಲ್ಯಮಾಪನ ಕೇಂದ್ರಗಳಲ್ಲಿ ಜು. 8 ರಿಂದ 14 ರ ವರೆಗೆ ಮೌಲ್ಯಮಾಪನ ಪ್ರಕ್ರಿಯೆ ನಡೆಯಲಿದೆ. ಮೌಲ್ಯಮಾಪನ ಕಾರ್ಯಕ್ಕಾಗಿ ಒಟ್ಟು 18 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ.
Comments