ಕನ್ನಡದಲ್ಲಿಯೂ ಇನ್ನುಮುಂದೆ ನಡೆಯಲಿದೆ ಟಿಸಿಇಟಿ (TCET) ಪರೀಕ್ಷೆ

ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (ಟಿಸಿಇಟಿ) ಈ ಮುಂಚಿನಂತೆ ಕನ್ನಡ ಸೇರಿದಂತೆ 20 ಭಾಷೆಗಳಲ್ಲಿ ಮುಂದು ವರಿಸುವಂತೆ ಈ ಪರೀಕ್ಷೆಗಳನ್ನು ಹಮ್ಮಿಕೊಳ್ಳುವ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಗೆ (ಸಿಬಿಎಸ್‌ಇ) ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚಿಸಿದೆ.
ಟಿಸಿಇಟಿಯಿಂದ ಕನ್ನಡ ಸೇರಿದಂತೆ 17 ಭಾಷಾ ಮಾಧ್ಯಮಗಳನ್ನು ತೆಗೆದು ಹಾಕಿ ಕೇವಲ 3 ಭಾಷೆಗಳಲ್ಲಿ ಪರೀಕ್ಷೆ ನಡೆಸಲು ಸಿಬಿಎಸ್‌ಇ ಇತ್ತೀಚೆಗೆ ನಿರ್ಧಾರ ಕೈಗೊಂಡಿತ್ತು. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಕೇಂದ್ರ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರು, ಈ ಎಲ್ಲ ಭಾಷೆಗಳಲ್ಲಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದ್ದಾಗಿ ಸೋಮವಾರ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಜಾವಡೇಕರ್, ಟಿಸಿಇಟಿ ಪರೀಕ್ಷೆಗಳನ್ನು ಎಲ್ಲ ಭಾರತೀಯ ಭಾಷೆಗಳಲ್ಲಿ ಈ ಮೊದಲಿನಂತೆ ನಡೆಸಲಾಗುತ್ತದೆ. ನಾನು ಈ ಬಗ್ಗೆ ಈಗಾಗಲೇ ಸಿಬಿಎಸ್‌ಇಗೆ ಸೂಚನೆ ನಿಡಿದ್ದೇನೆ. ಎಲ್ಲ 20 ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಈ ಪ್ರಕಾರ ಇಂಗ್ಲಿಷ್, ಹಿಂದಿ, ಬಾಂಗ್ಲಾ, ಅಸ್ಸಾಮಿ, ಗಾರೋ, ಗುಜರಾತಿ, ಕನ್ನಡ, ಖಾಸಿ, ಮಲಯಾಳಂ, ಮಣಿಪುರಿ, ಮರಾಠಿ, ಮಿಜೋ, ಒಡಿಯಾ, ಪಂಜಾಬಿ, ಸಂಸ್ಕೃತ, ತಮಿಳು, ತೆಲುಗು, ಟಿಬೆಟನ್ ಮತ್ತು ಉರ್ದು ಭಾಷೆಗಳಲ್ಲಿ ಸಿಬಿಎಸ್‌ಇ ಪರೀಕ್ಷೆ ನಡೆಸಲಿದೆ ಎಂದೂ ಜಾವಡೇಕರ್ ವಿವರಿಸಿದ್ದಾರೆ.
Comments