ಇನ್ನೂ ಆಧಾರ್ ಕಾರ್ಡ್ ಮಾಡಿಸಿಲ್ವ..!? ಹಾಗಿದ್ರೆ ಮೊದಲು ಈ ವಿಷ್ಯ ತಿಳ್ಕೊಳ್ಳಿ

ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳ ಕೆಲವೊಂದು ಸೌಲಭ್ಯಗಳನ್ನು ಪಡೆಯಲು ಆಧಾರ್ ಕಾರ್ಡ್ ತುಂಬಾ ಅವಶ್ಯಕ. ಹೀಗಾಗಿ ಆಧಾರ್ ಕಾರ್ಡ್ ಮಾಡಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆಯೇ ಈಗ ಬ್ಯಾಂಕ್ ಹಾಗೂ ಅಂಚೆ ಕಚೇರಿಗಳಲ್ಲಿಯೂ ಕೂಡ ಆಧಾರ್ ಕೇಂದ್ರಗಳನ್ನು ಆರಂಭ ಮಾಡಲಾಗಿದೆ.
ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಜಯ್ ಭೂಷಣ್ ಪಾಂಡೆ ಈ ವಿಷಯವನ್ನು ತಿಳಿಸಿದ್ದಾರೆ. ದೇಶದ ವಿವಿಧ ಬ್ಯಾಂಕ್ ಶಾಖೆಗಳು ಮತ್ತು ಅಂಚೆ ಕಚೇರಿಗಳಲ್ಲಿ ಒಟ್ಟು 18000 ಆಧಾರ್ ನೋಂದಣಿ ಕೇಂದ್ರಗಳನ್ನು ಪ್ರಾರಂಭ ಮಾಡಿದ್ದಾರೆ ಎನ್ನಲಾಗಿದೆ. 10 ಶಾಖೆಗಳಿಗೆ ತಲಾ ಒಂದರಂತೆ ಆಧಾರ್ ಕೇಂದ್ರವನ್ನು ಸ್ಥಾಪಿಸಲು ಪ್ರಾಧಿಕಾರವು, ಖಾಸಗಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಮನವಿಯನ್ನು ಮಾಡಿದ್ದಾರೆ. ಇದೇ ಹಿನ್ನೆಲೆಯಲ್ಲಿ ಆಧಾರ್ ನೋಂದಣಿ ಕೇಂದ್ರಗಳು ಪ್ರಾರಂಭವಾಗಿವೆ ಎಂದಿರುವ ಅವರು, ಬಾಕಿ ಇರುವ ಕೇಂದ್ರಗಳನ್ನು ಶೀಘ್ರದಲ್ಲೇ ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ.
Comments