ಜೂನ್ 29 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ...!!

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಇಂದು ಆರಂಭಗೊಳ್ಳಲಿದ್ದು, ಒಟ್ಟು ರಾಜ್ಯದ 301 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 1.33 ಲಕ್ಷ ಬಾಲಕರು ಮತ್ತು 91 ಸಾವಿರ ಬಾಲಕಿಯರು ಒಟ್ಟು 2.24 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಮಾಡಲಾಗಿದ್ದು, ಭದ್ರತೆಗಾಗಿ ಪೊಲೀಸ್ ಸಿಬ್ಬಂದಿ ನಿಯೋಜನೆಗೆ ಕ್ರಮ ಕೈಗೊಳ್ಳಲಾಗಿದೆ. ಜು.10ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ನಡೆಸಲು ಒಟ್ಟು 5,700 ಮಂದಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಒಟ್ಟು 398 ಮಂದಿ ಜಾಗೃತದಳ ಸಿಬ್ಬಂದಿಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ನಿಯೋಜಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಪೂರಕ ಪರೀಕ್ಷೆ ವೇಳೆ ಆನ್‌ಲೈನ್ ಮೂಲಕ ಪ್ರಶ್ನೆ ಪತ್ರಿಕೆ ರವಾನೆ ಮಾಡುವ ಯೋಜನೆಯನ್ನು ಮಲ್ಲೇಶ್ವರಂನ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಯೋಗಿಕವಾಗಿ ಮಾಡಲಾಗಿದೆ.
Comments