ಪೂಜೆ ಹಿನ್ನೆಲೆ ಸಿದ್ಧಗಂಗಾ ಶ್ರೀಗಳ ಹೆಸರು ಗಿನ್ನೆಸ್ ದಾಖಲೆಗೆ..!!

ಇಲ್ಲಿಯವರೆಗೂ ಸುಮಾರು 1 ಲಕ್ಷಕ್ಕೂ ಹೆಚ್ಚು ಬಾರಿ ಶಿವಪೂಜೆ ಮಾಡಿರುವ ಸಿದ್ಧಗಂಗಾ ಶ್ರೀಗಳಾದ ಡಾ. ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಗಿನ್ನೆಸ್ ಬುಕ್ ಆಫ್ ರೆಕಾರ್ಡ್‌ಗೆ ಸೇರಿಸಲು ಸಿದ್ಧತೆ ನಡೆಸಲಾಗಿದೆ.
ಡಾ. ಶಿವಕುಮಾರ ಸ್ವಾಮೀಜಿ ಅವರು ಶ್ರೀಮಠದ ಚುಕ್ಕಾಣಿ ಹಿಡಿದು 89 ವರ್ಷಗಳು ಕಳೆದಿದೆ. ಇದುವರೆಗೂ ಪ್ರತಿ ದಿನ 3 ಬಾರಿಯಂತೆ ಈ 89 ವರ್ಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಬಾರಿ ಶಿವಪೂಜೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿಗಳ ಹೆಸರನ್ನು ಗಿನ್ನೆಸ್ ಬುಕ್ ಆಫ್ ರೆಕಾರ್ಡ್‌ಗೆ ಸಲ್ಲಿಸಲು ಶ್ರೀಮಠದ ನಿವೃತ್ತ ಪ್ರಾಂಶುಪಾಲ ಚಂದ್ರಶೇಖರಯ್ಯ ಅವರು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಈ ಸಂಬಂಧ ಕನ್ನಡದಲ್ಲಿ ಮಾಹಿತಿ ಕಲೆ ಹಾಕಿದ್ದು ಅದನ್ನು ಇಂಗ್ಲಿಷ್‌ಗೆ ತರ್ಜುಮೆ ಮಾಡುವ ಕೆಲಸ ಬಾಕಿ ಇದೆ.
Comments