ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐ.ಎ.ಎಸ್ ಅಧಿಕಾರಿ ಆಯ್ಕೆ

30 Jun 2018 3:02 PM | General
751 Report

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐ.ಎ.ಎಸ್ ಅಧಿಕಾರಿ ಟಿ.ಎಂ ವಿಜಯ್ ಭಾಸ್ಕರ್ ಅವರನ್ನು ನೇಮಕ ಮಾಡಲಾಗಿದೆ.

ಹಾಲಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರ ಸೇವಾ ಅವಧಿ ಇಂದು ಅಂತ್ಯಗೊಳ್ಳಲಿದ್ದು, ಅವರ ಸ್ಥಾನಕ್ಕೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ವಿಜಯ್ ಭಾಸ್ಕರ್‌ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು ಮೂಲದ ವಿಜಯ್ ಭಾಸ್ಕರ್ ಅವರು 1983ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದು, ಬಿಬಿಎಂಪಿಯ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. 2017ರ ನವೆಂಬರ್‌ನಲ್ಲಿ 1981ನೇ ಬ್ಯಾಚ್ ಐಎಎಸ್ ಅಧಿಕಾರಿ ಕೆ.ರತ್ನಪ್ರಭಾ ಅವರನ್ನು ಮುಖ್ಯಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಆಗಲೇ ವಿಜಯಭಾಸ್ಕರ್ ಅವರ ಹೆಸರು ಮುಖ್ಯಕಾರ್ಯದರ್ಶಿ ಹುದ್ದೆಗೆ ಕೇಳಿಬಂದಿತ್ತು.

Edited By

Shruthi G

Reported By

Shruthi G

Comments