ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಪ್ರಧಾನಮಂತ್ರಿ ಆವಾಸ್ ಯೋಜನೆಗೆ ತಮ್ಮ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಇದ್ದಂತಹ ಅವಧಿಯನ್ನು ಈ ತಿಂಗಳ ಅಂದರೆ ಜುಲೈ 30 ವರೆಗೆ ವಿಸ್ತರಿಸಲಾಗಿದೆ ಎಂದು ವಸತಿ ಸಚಿವರಾದ ಯು.ಟಿ.ಖಾದರ್ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಆನ್ ಲೈನ್ ಮೂಲಕ ಹೆಸರನ್ನು ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ದಾಖಲೆ ಅಪ್ ಲೊಡ್ ಮಾಡುವುದು ಸೇರಿದಂತೆ ಒಂದು ನೋಂದಣಿ ಪ್ರಕ್ರಿಯೆಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ ಎಂದು ಯು.ಟಿ. ಖಾದರ್ ತಿಳಿಸಿದರು. ಈಗಾಗಲೇ 15 ಲಕ್ಷ ಫಲಾನುಭವಿಗಳನ್ನು ಈ ಯೋಜನೆಯಲ್ಲಿ ಗುರುತಿಸಲಾಗಿದೆ, ಯೋಜನೆ ಅಡಿಯಲ್ಲಿ ಮನೆ ಕಟ್ಟಿಕೊಳ್ಳಲು ಪ್ರತಿಯೊಬ್ಬ ಫಲಾನುಭವಿಗೆ 1.20 ಲಕ್ಷ ನೆರವು ಸಿಗಲಿದೆ ಎಂದು ತಿಳಿಸಿದರು.
Comments